ಶಿಕ್ಷಕರಲ್ಲಿ ಇರಬೇಕು ತಾಯಿಯ ಮಮತೆ

Btw_Prathiba Puraskara
Published on

ಬಂಟ್ವಾಳ: ಜಗತ್ತಿನ ಅಂಧಕಾರ ಹೋಗಲಾಡಿಸುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ. ಶಿಕ್ಷಕರಲ್ಲಿ ತಾಯಿಯ ಮಮತೆಯನ್ನು ಹೊಂದಿರುವಂತಹ ವಾತ್ಸಲ್ಯ ಗುಣವಿರಬೇಕು. ಆಗ ಮಗು ಆಸಕ್ತಿಯಿಂದ ಕಲಿಯುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಹೇಳಿದರು.

ನೆಟ್ಲ ಮುಡ್ನೂರು ಗ್ರಾಮ ಏಮಾಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಹಳೇ ವಿದ್ಯಾರ್ಥಿ ಸಂಘ ಹಾಗೂ ಶ್ರೀದೇವಿ ಗೆಳೆಯರ ಬಳಗ ಆಶ್ರಯದಲ್ಲಿ, ಪ್ರತಿಭಾ ಪುರಸ್ಕಾರ ಹಾಗೂ ಅಕ್ಷರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೆಟ್ಲ ಮುಡ್ನೂರು ಗ್ರಾಪಂ ಅಧ್ಯಕ್ಷೆ ಸಮಿತಾ ಡಿ.ಪೂಜಾರಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಗಣೇಶ್ ಆಚಾರ್ಯ, ಉಪಾಧ್ಯಕ್ಷ ಪ್ರಸಾದ್ ಆಚಾರ್ಯ, ನೆಟ್ಲ ಮುಡ್ನೂರು ಪಂಚಾಯಿತಿ ಉಪಾಧ್ಯಕ್ಷ ಸಚ್ಚಿದಾನಂದ, ಸದಸ್ಯರಾದ ಧನಂಜಯ ಗೌಡ, ಶಕೀಲಾ ಕೃಷ್ಣ ಮಿತ್ತಕೋಡಿ, ಸಹಶಿಕ್ಷಕ ವೆಂಕಟೇಶ್ ಅನಂತಾಡಿ, ನಿವೃತ್ತ ಪ್ರಾಂಶುಪಾಲ ಜಯರಾಮ್ ರೈ, ಮಾಣಿ ಕ್ಲಸ್ಟರ್ ಸಿ.ಆರ್.ಪಿ.ಸತೀಶ್ ರಾವ್ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ಡಾ.ತ್ರಿವೇಣಿ ರಮೇಶ್ ಸ್ವಾಗತಿಸಿದರು. ಸಹಶಿಕ್ಷಕ ಉದಯಚಂದ್ರ ಕೆ.ಎಸ್. ವರದಿ ವಾಚಿಸಿದರು. ಶಿಕ್ಷಕಿ ದೀಕ್ಷಾ ಬಹುಮಾನಿತರ ಪಟ್ಟಿ ವಾಚಿಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ಶೆಟ್ಟಿ ವಂದಿಸಿದರು. ಅತಿಥಿ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಯಶ್ವಿತಾ ಸಹಕರಿಸಿದರು.

ಅಕ್ಷರ ರತ್ನ ಪ್ರಶಸ್ತಿ ಪ್ರದಾನ

ಶಾಲೆಯ 7 ಪೂರ್ವಾಧ್ಯಕ್ಷರನ್ನು ಗೌರವಿಸಲಾಯಿತು. ಶಾಲಾ ವತಿಯಿಂದ ಈ ವರ್ಷದಿಂದ ಪ್ರಾರಂಭಿಸಲಾದ ಅಕ್ಷರ ರತ್ನ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಚಿನ್ನಾ ಕಲ್ಲಡ್ಕಗೆ ನೀಡಲಾಯಿತು. ಮುಖ್ಯಶಿಕ್ಷಕಿ ಡಾ.ತ್ರಿವೇಣಿ ರಮೇಶ್ ಹಾಗೂ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ಶೆಟ್ಟಿ ಅವರನ್ನು ಗೌರವಿಸಲಾಯಿತು. ವಿಶೇಷ ಸಾಧಕರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net