ರಬಕವಿ/ಬನಹಟ್ಟಿ ತಾಲೂಕಿನ ಸರ್ಕಾರಿ ಹಾಸ್ಟೆಲ್ ಹಾಗೂ ಆಸ್ಪತ್ರೆಗಳಿಗೆ ಕಂದಾಯ ಅಧಿಕಾರಿಗಳ ತಂಡ ಭಾನುವಾರ ಭೇಟಿ ನೀಡಿ ಪರಿಶೀಲಿಸಿತು.
ಇಂಡಿ ಉಪವಿಭಾಗಾಧಿಕಾರಿ, ತಾಲೂಕು ಉಸ್ತುವಾರಿ ಅಬೀದ್ ಗದ್ಯಾಳ ನೇತೃತ್ವದ ತಂಡ ರಬಕವಿ, ಬನಹಟ್ಟಿ, ತೇರದಾಳ, ಜಗದಾಳ ಸೇರಿ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಿತು.
ವಸತಿ ನಿಲಯ ಹಾಗೂ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಮೂಲ ಸೌಕರ್ಯ ಕಲ್ಪಿಸಿಕೊಡಬೇಕು ಎಂದು ಸಿಬ್ಬಂದಿಗೆ ಅಬೀದ್ ಗದ್ಯಾಳ ಸೂಚಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು.
ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅರ್ಚನಾ ಸಾಣೆ ಇದ್ದರು.