

ಬೆಂಗಳೂರು: ಮಕ್ಕಳನ್ನ ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(25) ಹಾಗೂ 1 ವರ್ಷದ ಮಗು, ಮೂರು ವರ್ಷದ ಇಬ್ಬರು ಹೆಣ್ಣುಮಕ್ಕಳಾದ ಮೋಕ್ಷ ಮೇಘನಯನ, ಹಾಗೂ ಸೃಷ್ಟಿ ಸುನಯನ, ಮೃತ ಮಕ್ಕಳು. ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿದೆ.
ದಂಪತಿ ಮೂಲತಃ ಆಂಧ್ರದವರಾಗಿದ್ದಾರೆ. ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ವೀರಾರ್ಜುನ್. ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು.ಆದರೆ ಅದೇನಾಯ್ತೂ ಗೊತ್ತಿಲ್ಲ ಇಡೀ ಕುಟುಂಬವೇ ಪ್ರಾಣವನ್ನೆ ಕಳೆದುಕೊಂಡಿದೆ. ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ನಂತರ ವೀರಾರ್ಜುನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜುಲೈ 31 ರ ರಾತ್ರಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇಂದು 12 ಘಂಟೆಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಕಾಡುಗೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.