More

    ಡೆತ್​ನೋಟ್​ ಬರೆದಿಟ್ಟು ಬೆಂಗಳೂರು ಸಮೀಪ ಕಿರುತೆರೆ ನಟಿ ಸವಿ ಮಾದಪ್ಪ ಆತ್ಮಹತ್ಯೆ

    ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಕಿರುತೆರೆ ನಟಿ ಸವಿ ಮಾದಪ್ಪ(ಸೌಜನ್ಯ) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಗುರುವಾರ ಬೆಳಗ್ಗೆ ದೊಡ್ಡಬೆಲೆ ಬಳಿಯ ಅಪಾರ್ಟ್​ಮೆಂಟ್​ನಲ್ಲಿ ತಮ್ಮ ನಿವಾಸದಲ್ಲೇ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವಿ ಮಾದಪ್ಪ ಬರೆದಿಟ್ಟಿದ್ದ ಡೆತ್​ನೋಟ್​ ಪತ್ತೆಯಾಗಿದೆ. ಸಾವಿಗೂ ಎರಡು ದಿನ ಮೊದಲೇ ಮನದ ನೋವನ್ನ ಅಕ್ಷರಕ್ಕಿಳಿಸಿದ್ದಾರೆ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಾನು ಸಾವಿನ ಮನೆಗೆ ಹೋಗುತ್ತಿದ್ದೇನೆ. ಕ್ಷಮಿಸಿ ಎಂದು ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ. ಇಂಗ್ಲಿಷ್​ನಲ್ಲಿ ಬರೆದಿರುವ ಡೆತ್​ನೋಟ್​ 4 ಪುಟ ಇದೆ.

    ಸವಿ ಮಾದಪ್ಪ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದು, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಚೌಕಟ್ಟು, ಫನ್​ ಚಿತ್ರಗಳಲ್ಲೂ ಬಣ್ಣ ಹಚ್ಚಿದ್ದರು. 25 ವರ್ಷದಕ್ಕೆ ದುರಂತ ಅಂತ್ಯಕಂಡಿದ್ದಾರೆ.

    ಲಕ್ಷ್ಮೀ ಹೆಬ್ಬಾಳ್ಕರ್​ಗೆ ರಾತ್ರಿ ರಾಜಕೀಯ ಚೆನ್ನಾಗಿ ಗೊತ್ತು: ಬಿಜೆಪಿ ಮಾಜಿ ಶಾಸಕರ ವಿವಾದಾತ್ಮಕ ಹೇಳಿಕೆ

    ಗಂಡಂದಿರನ್ನ ಕಳ್ಕೊಂಡು ತವರಿಗೆ ಬಂದ ಮಗಳ ಕಣ್ಣಿಗೆ ಬಿತ್ತು ತಾಯಿ-ದೊಡ್ಡಪ್ಪನ ಲವ್ವಿಡವ್ವಿ… ಮುಂದಾಗಿದ್ದು ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts