

ಬೆಂಗಳೂರು: ಮೈಸೂರು – ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆ ಮದ್ದೂರಿನ ಎಕ್ಸ್ಪ್ರೆಸ್ ಹೈವೇ ಫ್ಲೈ ಓವರ್ ಬಳಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿವೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.