More

    ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳು, ಅತ್ತೆಯ ತಲೆ ಒಡೆದು ಕೊಂದ! ತಡರಾತ್ರಿ ಮಲಗಿದ್ದಲ್ಲೇ ಹೆಣವಾದ ನಾಲ್ವರು

    ಮೈಸೂರು: ಇಲ್ಲೊಬ್ಬ ಕಿರಾತಕ ಮನೆಯಲ್ಲಿ ಮಲಗಿದ್ದ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಅತ್ತೆಯ ತಲೆ ಒಡೆದು ಭೀಕರವಾಗಿ ಕೊಲೆ ಮಾಡಿದ್ದು, ಮೈಸೂರಿನ ಜನತೆ ಬೆಚ್ಚಿಬಿದ್ದಿದ್ದಾರೆ.

    ಚಾಮೇಗೌಡನಹುಂಡಿ ಗ್ರಾಮದಲ್ಲಿ ನಿನ್ನೆ(ಬುಧವಾರ) ರಾತ್ರಿ ಈ ದುರ್ಘಟನೆ ನಡೆದಿದೆ. ಮಣಿಕಂಠಸ್ವಾಮಿಯ ಅತ್ತೆ ಕೆಂಪಾಜಮ್ಮ(60), ಪತ್ನಿ ಗಂಗಾ(28), ಮಕ್ಕಳಾದ ರೋಹಿತ್(4) ಮತ್ತು ಸಾಮ್ರಾಟ್(2) ಮೃತ ದುರ್ದೈವಿಗಳು. ಈ ನಾಲ್ವರನ್ನು ಮಣಿಕಂಠಸ್ವಾಮಿಯೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ಗಂಗಾ ಗರ್ಭಿಣಿಯಾಗಿದ್ದಳು.

    ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠಸ್ವಾಮಿಗೆ ಕುಡಿತದ ಚಟ ಇತ್ತು. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಈತ, ಕುಡಿದ ಅಮಲಿನಲ್ಲಿ ಅತ್ತೆ, ಹೆಂಡತಿ, ಇಬ್ಬರು ಮಕ್ಕಳ ತಲೆಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ನಾಲ್ವರು ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮಣಿಕಂಠಸ್ವಾಮಿ ತಲೆ ಮರೆಸಿಕೊಂಡಿದ್ದಾನೆ.

    ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸರಗೂರು ಪಿಎಸ್ಐ ದಿವ್ಯಾ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಭೀಕರ ಹತ್ಯೆಯ ದೃಶ್ಯ ನೋಡಿದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

    ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts