ವಿಶಾಖಪಟ್ಟಣಂ: ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಛತ್ತೀಸ್‌ಗಢದ ಕೊರ್ಬಾದಿಂದ ವಿಶಾಖಪಟ್ಟಣಂ ತಲುಪಿದ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಎಸಿ ಬೋಗಿಗಳು ಸುಟ್ಟು ಕರಕಲಾಗಿವೆ.
ಇದನ್ನೂ ಓದಿ: ಬಸ್, ಕಾರಿನ ನಡುವೆ ಭೀಕರ ಅಪಘಾತ; 7 ಮಂದಿ ಸಾವು, 40ಕ್ಕೂ ಅಧಿಕ ಮಂದಿ ಗಂಭೀರ
ರೈಲಿನ ಬಿ7 ಬೋಗಿಯಲ್ಲಿನ ಶೌಚಾಲಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದರ ಪರಿಣಾಮ ಬಿ7 ಬೋಗಿ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಮತ್ತೆರಡು ಬೋಗಿಗಳು ಭಾಗಶಃ ಸುಟ್ಟು ಕರಕಲಾಗಿವೆ. ಘಟನೆ ವೇಳೆ ರೈಲಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ರೈಲ್ವೇ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತರಲು ಕ್ರಮಕೈಗೊಂಡಿದ್ದಾರೆ.
ಭಾನುವಾರ ಬೆಳಗ್ಗೆ 10 ಗಂಟೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಯಿತು. ನಾಲ್ಕು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸಲಾಯಿತು. ಸುಟ್ಟ ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಿ ಸ್ಥಳಾಂತರಿಸಲಾಗುತ್ತಿದೆ. ಬೆಂಕಿ ಅವಘಡದ ಬಗ್ಗೆ ರೈಲ್ವೆ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಎಲ್ಲಾ ಪ್ರಯಾಣಿಕರು ರೈಲಿನಿಂದ ಕೆಳಗಿಳಿದರು. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಚ್ ಸ್ಥಾನದಲ್ಲಿ ಹೆಚ್ಚು ದಿನ ಉಳಿಯಲ್ಲ; ಗೌತಿ ಕುರಿತು ಶಾಕಿಂಗ್ ಹೇಳಿಕೆ ಕೊಟ್ಟ ವಿಶ್ವಕಪ್ ವಿಜೇತ ತಂಡದ ಆಟಗಾರ