ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ…

ತುಮಕೂರು: ಸ್ವಗ್ರಾಮಕ್ಕೆ ಮಗುವಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಾಣಂತಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಗೋಪನಾಳ್ ಗ್ರಾಮದ ಮಂಜುನಾಥ್ ಮತ್ತು ಗೌರಮ್ಮ ದಂಪತಿ ತುಮಕೂರು ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ನಾಲ್ಕು ದಿನದ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಗೌರಮ್ಮ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಇಂದು(ಸೋಮವಾರ) ಮುಂಜಾನೆ 4 ಗಂಟೆಯಲ್ಲಿ ಆಸ್ಪತ್ರೆಯಲ್ಲೇ ಮಗು ಮೃತಪಟ್ಟಿದೆ. ಮಗುವಿನ ಶವ ತೆಗೆದುಕೊಂಡು ಹೋಗುವಂತೆ ವೈದ್ಯರು ತಿಳಿಸಿದ್ದಾರೆ. ಆದರೆ, ಮಗುವನ್ನ ಕಳೆದುಕೊಂಡ ನೋವು ಒಂದೆಡೆಯಾದರೆ, … Continue reading ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ…