More

    ಆಂಜನೇಯ ವಿಗ್ರಹದ ಮುಂದೆ ಗುಂಡಿ ತೋಡಿದ್ದರು, ದೇಗುಲದಲ್ಲೇ ಇತ್ತು ಮಹಿಳೆ ಶವ! ವಾಸನೆ ಜಾಡು ಹಿಡಿದು ಹೊರಟವರಿಗೆ ಶಾಕ್​

    ತುಮಕೂರು: ಬೆಟ್ಟದ ಮೇಲಿನ ದೇವಾಲಯವೊಂದರ ಬಳಿ ಮಹಿಳೆಯನ್ನು ಹತ್ಯೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಿಧಿಗಳ್ಳರು ದೇವರ ವಿಗ್ರಹದ ಮುಂದೆಯೇ ನಿಧಿಗಾಗಿ ಹಳ್ಳ ತೋಡಿದ್ದು, ಸಮೀಪದಲ್ಲೇ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.

    ತುಮಕೂರು ತಾಲೂಕಿನ ಜಕ್ಕೇನಹಳ್ಳಿ ಬಳಿಯ ಎಂ. ಗೊಲ್ಲಹಳ್ಳಿ ಗ್ರಾಮ ಹೊರವಲಯದ ಬೆಟ್ಟದ ಮೇಲೆ ಆಂಜನೇಯಸ್ವಾಮಿ ದೇವಾಲಯ ಇದೆ. ಈ ದೇಗುಲದ ಒಳಭಾಗದಲ್ಲಿರುವ ಆಂಜನೇಯ ವಿಗ್ರಹದ ಮುಂಭಾಗ ನಿಧಿಗಾಗಿ ಅಗೆದು ಪೂಜೆ ಸಲ್ಲಿಸಿರುವ ದೃಶ್ಯ ಕಂಡು ಬಂದಿವೆ. ಕುರಿಗಾಹಿಗಳು ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ ದುರ್ವಾಸನೆ ಬಂದಿದ್ದು, ದೇವಾಲಯದ ಅಕ್ಕಪಕ್ಕ ಎಲ್ಲ ಹುಡುಕಾಡಿ ನೋಡಿದಾಗ ಮಹಿಳೆಯ ಕೂದಲು ಕಂಡು ಬಂದಿದ್ದು, ಮೃತದೇಹ ಸಂಪೂರ್ಣ ಗುರುತು ಸಿಗದಂತಾಗಿದೆ. ತಕ್ಷಣ ಕುರಿಗಾಹಿಗಳು ದೇವಾಲಯದ ಬಳಿ ಶವ ಬಿದ್ದಿರುವ ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗಾಬರಿಗೊಂಡ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

    ಈ ಸುದ್ದಿ ತಿಳಿದ ತುಮಕೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತಪ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೆ ಮಹಿಳೆ ಸಾವಿನ ರಹಸ್ಯ ಬಹಿರಂಗಗೊಳ್ಳಬೇಕಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಶವ ಪರೀಕ್ಷೆಯ ನಂತರ ತಿಳಿಯಲಿದೆ.

    ನಿಧಿಗಾಗಿ ನಡೆಯಿತೇ ಮಹಿಳೆ ಕೊಲೆ?: ಎಂ.ಗೊಲ್ಲಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಆಂಜನೇಯಸ್ವಾಮಿ ದೇವಾಲಯದ ಬಳಿ ಆಗಿಂದಾಗ್ಗೆ ನಿಧಿಗಾಗಿ ಕಿಡಿಗೇಡಿಗಳು ಅಗೆದು ದೇವಾಲಯ ಆವರಣವನ್ನು ಹಾಳು ಮಾಡುತ್ತಿದ್ದರು ಎನ್ನಲಾಗಿದೆ. ದೇವಾಲಯ ಬೆಟ್ಟದ ಮೇಲಿರುವ ಕಾರಣ ಗ್ರಾಮಸ್ಥರು ಯಾರೂ ಆ ಕಡೆ ಸುಳಿಯುತ್ತಿರಲಿಲ್ಲ. ಹುಣ್ಣಿಮೆ, ಅಮಾವಾಸ್ಯೆಗಳಂದು ಈ ದೇವಾಲಯದಲ್ಲಿ ಪೂಜೆ ನಡೆಯುತ್ತಿತ್ತೆಂದು ಹೇಳಲಾಗಿದೆ.

    ಈ ದೇವಾಲಯದಲ್ಲಿ ಕಿಡಿಗೇಡಿಗಳು ನಿಧಿ ಆಸೆಯಿಂದ ಅಗೆದು ಮಹಿಳೆಯನ್ನು ಬಲಿ ಕೊಟ್ಟಿರಬಹುದು ಎಂಬ ಶಂಕೆಯನ್ನು ಕೆಲ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಆದರೆ ಇದು ಸತ್ಯವೋ ಅಥವಾ ಕೇವಲ ಊಹಾಪೋಹವೋ ಎಂಬುದನ್ನು ಪೊಲೀಸರ ತನಿಖೆಯಿಂದಷ್ಟೆ ಖಚಿತ ಪಡಿಸಿಕೊಳ್ಳಬೇಕಿದೆ. ಗ್ರಾಮಾಂತರ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಲಕ್ಷ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖಾ ಕಾರ್ಯ ಕೈಗೊಂಡಿದ್ದಾರೆ.

    ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

    ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

    ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

    ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts