More

    ಧರಣಿ ಹಿಂಪಡೆದ ಗ್ರಾಪಂ ಸದಸ್ಯರ ಒಕ್ಕೂಟ

    ಮದ್ದೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 6 ದಿನಗಳಿಂದ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಜಿಪಂ ಸಿಇಒ ಭರವಸೆ ಮೇರೆಗೆ ಧರಣಿಯನ್ನು ತಾತ್ಕಾಲಿಕವಾಗಿ ಸೋಮವಾರ ಹಿಂಪಡೆಯಲಾಯಿತು.


    ಜಲಜೀವನ್ ಮಿಷನ್ ಅನುಷ್ಠಾನದಲ್ಲಿ ವಿಳಂಬ ಮತ್ತು ಯೋಜನೆಯಲ್ಲಿ ನಡೆದಿರುವ ಕಳಪೆ ಕಾಮಗಾರಿ ತನಿಖೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗೆ ಒತ್ತಾಯಿಸಿ ಗ್ರಾಪಂ ಸದಸ್ಯರ ಒಕ್ಕೂಟ, ವಿವಿಧ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ತಾಲೂಕಿನ 42 ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಧರಣಿ ಸತ್ಯಗ್ರಹ ಕೈಗೊಂಡಿದ್ದರು.


    ಈ ಸಂಬಂಧ ಜಿಪಂ ಸಿಇಒ ಶೇಕ್‌ತನ್ವಿರ್‌ಆಸಿಫ್ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಮಾ.2 ರಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ಭವದನಲ್ಲಿ ಜಿಪಂ ವ್ಯಾಪ್ತಿಯ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಬೇಡಿಕೆಗಳ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ನಂತರ ಧರಣಿ ಸತ್ಯಾಗ್ರಹ ತಾತ್ಕಾಲಿಕವಾಗಿ ಹಿಂಪಡೆಯುವುದಾಗಿ ಒಕ್ಕೂಟದ ಅಧ್ಯಕ್ಷ ಜಿ.ಎನ್.ಸತ್ಯ ಸುದ್ದಿಗಾರರಿಗೆ ತಿಳಿಸಿದರು.


    ಜಿಪಂ ವ್ಯಾಪ್ತಿಯ ಸಮಸ್ಯೆಗಳನ್ನು ಸಭೆಯಲ್ಲಿ ಬಗೆಹರಿಸಬೇಕು ಹಾಗೂ ಸರ್ಕಾರದ ಮಟ್ಟದ ಸಮಸ್ಯೆಗಳನ್ನು ಜಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರಿ ತೆಗೆದುಕೊಂಡು ಬಗೆಹರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಒಂದು ವೇಳೆ ಸಭೆಯಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಗೆ ಸ್ಪಂದನೆ ಸಿಗದಿದ್ದಲ್ಲಿ ಚಳವಳಿಯನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಜಿ.ಎನ್. ಸತ್ಯ ಎಚ್ಚರಿಕೆ ನೀಡಿದರು.


    ಮದ್ದೂರು ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಇ.ಕೃಷ್ಣ, ತಾಲೂಕು ಗೌರವಾಧ್ಯಕ್ಷ ಎಸ್.ದಯಾನಂದ, ಉಪಾಧ್ಯಕ್ಷರಾದ ಡಿ.ನಳಿನಿ, ಸಿ.ಶಿವಲಿಂಗಯ್ಯ, ಬ್ಯಾಡರಹಳ್ಳಿ ರಾಮಕೃಷ್ಣ, ಎಂ.ಮಹೇಶ್, ಎಸ್.ಬಿ.ತಮ್ಮೇಗೌಡ, ಸಂಘಟನಾ ಕಾರ್ಯದರ್ಶಿಗಳಾದ ವಿಜಯ್‌ಎನ್.ಗೌಡ, ಎ.ಜಗದೀಶ್, ಮಾದೇಶ್, ಎಂ.ಚಂದ್ರಶೇಖರ, ಶ್ವೇತಾ, ಖಜಾಂಚಿ ಎಚ್.ಕೆ.ನಂದೀಶ್‌ಗೌಡ, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಬಿ.ಬಿ.ಮಂಜುನಾಥ, ನಿರ್ದೇಶಕರಾದ ಎಚ್.ಎಲ್.ದಯಾನಂದ, ಮಹಾಲಕ್ಷ್ಮೀ, ಎಚ್.ಗೋವದರ್ನ, ಎಸ್.ಕೃಷ್ಣ, ಕೃಷ್ಣ, ಕೆ.ಆರ್.ವೆಂಕಟೇಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts