More

    ರಾಜ್ಯಕ್ಕೆ ತುರ್ತಾಗಿ ಬೇಕಿದೆ 1142 ಟನ್ ಆಕ್ಸಿಜನ್​: ಸಿಎಂ ಬಿಎಸ್​ವೈ ಮನವಿಗೆ ಪ್ರಧಾನಿ ಹೇಳಿದ್ದೇನು?

    ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ರಾಜ್ಯ ಸರ್ಕಾರಗಳು ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಲಹೆ ನೀಡಿದರು.

    ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಪ್ರಧಾನಿ, ಕರೊನಾ ಸಂಕಷ್ಟ ಕಾಲವನ್ನ ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅನಗತ್ಯವಾಗಿ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸಬೇಕು. ಆಮ್ಲಜನಕದ ಸಮರ್ಪಕ ಮತ್ತು ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಸೂಚನೆ ನೀಡಿದರು. ಇದನ್ನೂ ಓದಿರಿ ಕ್ಯಾಂಟರ್​ನಲ್ಲಿ ಮಲಗಿದ್ದವರ ಮೇಲೆ ತೊಗರಿ ಮೂಟೆಗಳು ಬಿದ್ದು ಸ್ಥಳದಲ್ಲೇ ಯುವಕರಿಬ್ಬರ ಸಾವು!

    ಆಮ್ಲಜನಕದ ದುರ್ಬಳಕೆ ಆಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸಬೇಕು. ಆಕ್ಸಿಜನ್​ ಟ್ಯಾಂಕರ್​ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು. ಕರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ಕಾರ್ಯಕ್ಕೆ ಇತ್ತೀಚಿಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು.

    ಇನ್ನು ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮ ಮತ್ತು ರಾಜ್ಯದ ವಸ್ತುಸ್ಥಿತಿ ಬಗ್ಗೆ ವಿವರಿಸಿದ ಸಿಎಂ ಬಿ.ಎಸ್​.ಯಡಿಯೂರಪ್ಪ, ರಾಜ್ಯದಲ್ಲಿ ಆಕ್ಸಿಜನ್​ ಬಳಕೆ ದಿನೇದಿನೆ ಹೆಚ್ಚುತ್ತಿದ್ದು, ನಿನ್ನೆ(ಗುರವಾರ) ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು. ಭಾರತ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25ರಿಂದ 1142 ಟನ್ ಆಮ್ಲಜನಕದ ಅಗತ್ಯವಿದೆ. ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಕೂಡಲೇ ಆಕ್ಸಿಜನ್​ ಕೊರತೆ ನೀಗಿಸಿ ಎಂದು ಪ್ರಧಾನಿಗೆ ಮನವಿ ಮಾಡಿದರು.

    ಮುಂದಿನ ದಿನಗಳಲ್ಲಿ ಅನಿವಾರ್ಯವಾದಲ್ಲಿ ಖಾಸಗಿ ಆಸ್ಪತ್ರೆಗಳು ಸಮೀಪದ ಹೋಟೆಲ್​ಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದ ಸಿಎಂ ಬಿಎಸ್​ವೈ, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ ರೆಮ್ ಡಿಸಿವಿರ್ ಬೇಕಿದೆ. ಅದನ್ನು ಒದಗಿಸಿ ಎಂದು ಪ್ರಧಾನಿಗೆ ಮನವಿ ಮಾಡಿದರು.

    ಕುಷ್ಟಗಿ ಪುರಸಭೆ ಉಪಾಧ್ಯಕ್ಷೆ ರಾಜೇಶ್ವರಿ ಆತ್ಮಹತ್ಯೆ!

    ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts