More

    ಸಂಚಾರಿ ವಿಜಯ್​ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

    ಬೆಂಗಳೂರು: ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕನ್ನಡದಲ್ಲೇ ಟ್ವೀಟ್​ ಮಾಡಿದೆ.

    ”ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್​ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ ‘ಪ್ರೈಡ್​’ ತಿಂಗಳ ಆಚರಣೆಯ ಅಂಗವಾಗಿ ತೃತೀಯ ಲಿಂಗಿಗಳ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ, ಅವಳು’ ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದರು ಸಂಚಾರಿ ವಿಜಯ್‌. ಆರ್​ಐಪಿ” ಎಂದು ಟ್ವೀಟ್​ ಮೂಲಕ ಅಮೆರಿಕಾ ರಾಯಭಾರ ಕಚೇರಿ ಸಂತಾಪ ತಿಳಿಸಿದೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ಅಗಲಿಕೆ ಕನ್ನಡ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟ. ಇವರ ನಿಧನಕ್ಕೆ ಸಿನಿ ರಂಗ, ಅಭಿಮಾನಿಗಳು, ಕುಟುಂಬಸ್ಥರು, ಗಣ್ಯರು ಕಂಬನಿ ಮಿಡಿದ್ದಿದ್ದಾರೆ.

    ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜತೆಗೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

    ಸಾವಿಗೂ 4 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

    ನಟ ಸಂಚಾರಿ ವಿಜಯ್​ಗೆ ಧಾರವಾಡ ಕಲಾವಿದನ ‘ಕಲಾ ಶ್ರದ್ಧಾಂಜಲಿ’

    ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್​, ಅಂಗಾಂಗ ದಾನದಿಂದ 7 ಜನರಿಗೆ ಹೊಸ ಬದುಕು

    ಬಡತನ ಕಾರಣಕ್ಕೆ 2 ವರ್ಷ ಓದಿಗೆ ಗುಡ್​ಬೈ ಹೇಳಿದ್ದ ವಿಜಯ್​ಗೂ ತಿಪಟೂರಿಗೂ ಇತ್ತು ಅವಿನಾಭಾವ ನಂಟು!

    ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts