More

    UP Election: ಮೊದಲು ಮತದಾನ, ನಂತರ ಉಪಾಹಾರ ಎಂದು ಕರೆ ಕೊಟ್ಟ ಪ್ರಧಾನಿ

    ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಎಲ್ಲರೂ ಕರೊನಾ ನಿಯಮಗಳನ್ನು ಪಾಲಿಸುತ್ತಾ ಪ್ರಜಾಪ್ರಭುತ್ವ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ.

    ಮತದಾನ ಆರಂಭಕ್ಕೂ ಕೆಲ ಕ್ಷಣದ ಮುನ್ನ ಹಿಂದಿಯಲ್ಲಿ ಟ್ವೀಟ್​ ಮಾಡಿರುವ ಪ್ರದಾನಿ, ಮತದಾನ ಮಾಡುವಂತೆ ಹುರಿದುಂಬಿಸಿದ್ದಾರೆ. ‘ನೆನಪಿಡಿ ಮೊದಲು ಮತದಾನ, ನಂತರ ಉಪಾಹಾರ’ ಎಂದಿದ್ದಾರೆ.

    ಒಟ್ಟು 403 ಕ್ಷೇತ್ರಗಳ ಪೈಕಿ ಮೊದಲ ಹಂದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, 58 ಕ್ಷೇತ್ರಗಳಲ್ಲಿ 623 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.

    2017ರಲ್ಲಿ ನಡೆದ ಚುನಾವಣೆಯಲ್ಲಿ ಈ 58 ಕ್ಷೇತ್ರಗಳ ಪೈಕಿ 53 ಬಿಜೆಪಿ ಪಾಲಾಗಿದ್ದವು. ಬಹುಜನ ಸಮಾಜ ಪಾರ್ಟಿ (ಬಿಎಸ್​ಪಿ) ಮತ್ತು ಸಮಾಜವಾದಿ ಪಾರ್ಟಿ (ಎಸ್​ಪಿ) ತಲಾ 2 ಸ್ಥಾನಗಳನ್ನು ಗೆದ್ದರೆ, ಆರ್​ಎಲ್​ಡಿ 1 ಸ್ಥಾನದಲ್ಲಿ ಗೆಲುವು ಕಂಡಿತ್ತು.

    ಉತ್ತರ ಪ್ರದೇಶಲ್ಲಿ ಮೊದಲ ಹಂತದ ಮತದಾನ ಆರಂಭ: ಯೋಗಿ ಸಂಪುಟ ಸಚಿವರ ಭವಿಷ್ಯ ಮತದಾರರ ಕೈಯಲ್ಲಿ

    ಅಪ್ಪು ಆಗಮನಕ್ಕಾಗಿ ಕಾಯುತ್ತಿದೆ ಹಿರಿಯ ಜೀವ! ಪುನೀತ್​ ಅಗಲಿರುವ ವಿಷಯವೇ ಗೊತ್ತಿಲ್ಲ… ಮನಕಲಕುತ್ತೆ ಈ ಸ್ಟೋರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts