20.3 C
Bangalore
Sunday, December 15, 2019

VIDEO: ಹೊಸ ಟ್ರಾಫಿಕ್​ ನಿಯಮದಡಿ 2000 ರೂ. ದಂಡ ತುಂಬುವ ಪರಿಸ್ಥಿತಿ ಬಂದರೆ ಬರೀ 100 ರೂ. ತುಂಬಬಹುದು ಎಂದ ಪೊಲೀಸ್​…

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ ದಂಡದ ಪ್ರಮಾಣದ 10 ಪಟ್ಟು ಈಗ ಹೆಚ್ಚಿಸಲಾಗಿದ್ದು ಹಲವರು ಪ್ರತಿಭಟನೆಯನ್ನೂ ಮಾಡಿದ್ದಾರೆ.

ಈ ಮಧ್ಯೆ ಪೊಲೀಸ್​ ಅಧಿಕಾರಿಯೋರ್ವರು ಇದೇ ಸಂಚಾರಿ ನಿಯಮ ಉಲ್ಲಂಘನೆ, ದಂಡ ತುಂಬುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಡಿಯೋವೊಂದನ್ನು ಮಾಡಿದ್ದು ಅದೀಗ ಫೇಸ್​ಬುಕ್​ನಲ್ಲಿ ವೈರಲ್​ ಆಗಿದೆ. ಅಲ್ಲದೆ ಶೇರ್​ ಮಾಡಿದ ದಿನದಿಂದ ಇಲ್ಲಿಯವರೆಗೆ 9.7 ಮಿಲಿಯನ್​ ಜನರು ವೀಕ್ಷಿಸಿ, ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ. ಹಾಗೇ ದಂಡ ತುಂಬುವ ವಿಚಾರದಲ್ಲಿ ಅರಿವು ಮೂಡಿಸಿರುವ ಆ ಪೊಲೀಸ್​ ಅಧಿಕಾರಿಗೆ ಕೃತಜ್ಞತೆಯನ್ನೂ ಸಲ್ಲಿಸಿದ್ದಾರೆ. ಅಷ್ಟಕ್ಕೂ ಪೊಲೀಸ್​ ಹೇಳಿರುವ ವಿಚಾರ ಇಂಟರೆಸ್ಟಿಂಗ್​ ಆಗಿಯೂ ಇದೆ.

ಈ ಪೊಲೀಸ್​ ತಮ್ಮನ್ನು ತಾವು ಸುನಿಲ್​ ಸಂಧು ಎಂದು ಪರಿಚಯ ಮಾಡಿಕೊಂಡಿದ್ದಾರೆ. ಭಾರೀ ಪ್ರಮಾಣದ ದಂಡ ವಿಧಿಸಿದಾಗ ಅದನ್ನು ಹೇಗೆ ಕಡಿಮೆ ಮಾಡಿಕೊಳ್ಳಬಹುದು. ಉದಾಹರಣೆಗೆ 2000 ರೂಪಾಯಿ ದಂಡವನ್ನು ವಿಧಿಸಿದ್ದರೂ ಅದರ ಬದಲಿಗೆ ಹೇಗೆ 100 ರೂಪಾಯಿ ಮಾತ್ರ ದಂಡ ಕಟ್ಟಬಹುದು ಎಂಬುದರನ್ನು ವಿವರಿಸಿದ್ದಾರೆ.

ಚಾಲನಾ ಪರವಾನಗಿ ಅಥವಾ ರಿಜಿಸ್ಟ್ರೇಶನ್​ ದಾಖಲೆ ಇಲ್ಲದಿದ್ದರೆ 5000 ರೂ., ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಇಲ್ಲದೆ ಹೋದರೆ 10,000ರೂ., ಇನ್ಶೂರೆನ್ಸ್​ ಇಲ್ಲದೆ ಹೋದರೆ 2000 ರೂಪಾಯಿಯನ್ನು ಚಾಲಕರು ತುಂಬಲೇಬೇಕು. ಇವಿಷ್ಟರಲ್ಲಿ ಯಾವುದೇ ದಾಖಲೆಯನ್ನು ಮರೆತು ವಾಹನ ಚಾಲಿಸಿಕೊಂಡು ಹೋಗುತ್ತಿರುವಾಗ ಪೊಲೀಸರ ಬಳಿ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ. ಆದರೆ ಈ ದಂಡದ ಮೊತ್ತದ ಪ್ರಮಾಣವನ್ನು ತಗ್ಗಿಸಿಕೊಳ್ಳಬಹುದು. ಅದರಲ್ಲೂ ಬರೀ 100 ರೂಪಾಯಿ ಮಾತ್ರ ತುಂಬಬಹುದು ಎಂದು ಸುನಿಲ್ ಸಂಧು ಹೇಳಿದ್ದಾರೆ.

ಇಷ್ಟು ದೊಡ್ಡ ಮೊತ್ತದ ದಂಡವನ್ನು ಸ್ಥಳದಲ್ಲೇ ತುಂಬಬೇಕು ಎಂದೇನಿಲ್ಲ. 15ದಿನ ಸಮಯ ತೆಗೆದುಕೊಳ್ಳಬಹುದು. ಆ ಹದಿನೈದು ದಿನಗಳ ಒಳಗೆ ಎಲ್ಲ ರೀತಿಯ ದಾಖಲೆಗಳನ್ನೂ ಮೇಲಧಿಕಾರಿಗಳಿಗೆ ನೀಡಿ, ಅದು ಎಲ್ಲವೂ ಸರಿಯಾಗಿದೆ ಎಂದಾದರೆ ಕೇವಲ 100 ರೂಪಾಯಿಯಷ್ಟು ಮಾತ್ರ ದಂಡ ಕೊಟ್ಟು ಬರಬಹುದು ಎಂಬ ಸತ್ಯವನ್ನು ಸುನಿಲ್​ ಹೇಳುವ ಮೂಲಕ ಕಾಯ್ದೆಯ ನಿಯಮದ ಬಗ್ಗೆ ಅರಿವು ಮೂಡಿಸಿದ್ದಾರೆ.
ಆದರೆ ಈ ವಿಧಾನ ಕುಡಿದು ಗಾಡಿ ಓಡಿಸುವವರಿಗೆ, ಹೆಲ್ಮೆಟ್​ ಇಲ್ಲದೆ ಸಂಚಾರ ಮಾಡುವವರಿಗೆ ಅನ್ವಯವಾಗುವುದಿಲ್ಲ. ಯಾಕೆಂದರೆ ಅದೆಲ್ಲ ಅಪರಾಧ ಎಂದೂ ಹೇಳಿದ್ದಾರೆ.

ಹೊಸ ನಿಯಮದ ಬಗ್ಗೆ ಅದೆಷ್ಟೋ ಜನರಿಗೆ ಸಂಪೂರ್ಣ ತಿಳಿವಳಿಕೆ ಇಲ್ಲ. ಹೀಗಿರುವಾಗ ಈ ಪೊಲೀಸ್​ ಅಧಿಕಾರಿಯ ವಿಡಿಯೋ ಸಿಕ್ಕಾಪಟೆ ವೈರಲ್​ ಆಗುತ್ತಿದೆ. (ಏಜೆನ್ಸೀಸ್​)

22000 हजार का #चालान 400 में कैसे निपटाए

22000 हजार का #चालान 400 में कैसे निपटाए, इस पुलिस जवान ने एकदम सही सलाह दी है

Studfeed ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಬುಧವಾರ, ಸೆಪ್ಟೆಂಬರ್ 11, 2019

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...