ಮನೆಯಲ್ಲೇ ನೇಣು ಬಿಗಿದುಕೊಂಡು ಗ್ರಾಮ ಲೆಕ್ಕಿಗ ಆತ್ಮಹತ್ಯೆ

sucide
Published on

ಹಾಸನ: ಬೇಲೂರು ಪಟ್ಟಣದ ನೆಹರು ನಗರದಲ್ಲಿ ಗ್ರಾಮ ಲೆಕ್ಕಿಗರೊಬ್ಬರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.

ಬಸವರಾಜು(46) ಮೃತ ದುರ್ದೈವಿ. ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಲೆಕ್ಕಿಗ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೇಲೂರು ಪಟ್ಟಣದಲ್ಲಿ ವಾಸವಿದ್ದ ಇವರು, ಭಾನುವಾರ ರಾತ್ರಿ ನೇಣುಬಿಗಿದುಕೊಂಡು ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net