More

    ರಾಜ್ಯದಲ್ಲಿ ಉನ್ನತ ಶಿಕ್ಷಣ ಕಾಲೇಜು ತರಗತಿ ಆರಂಭ ಯಾವಾಗ?

    ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದ ಕಾಲೇಜು ತರಗತಿಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದರು.

    ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಆಫ್​ಲೈನ್ ಕ್ಲಾಸ್ ಕಡ್ಡಾಯ ಅಲ್ಲ. ಇಷ್ಟ ಇದ್ದವರು ಲಸಿಕೆ ಪಡೆದು ಬರಬಹುದು, ಇಲ್ಲದವರು ಆನ್​ಲೈನ್ ಕ್ಲಾಸ್​ನಲ್ಲಿ ಪಾಠ ಕೇಳಬಹುದು. ಆದರೆ, ಹಾಜರಿ ಮಾತ್ರ ಕಡ್ಡಾಯ. ಮೇ ತಿಂಗಳಿಂದಲೇ ಆನ್​ಲೈಸ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಜತೆಗೆ, ಸಂಪರ್ಕ ತರಗತಿಗಳೂ ನಡೆಯುತ್ತಿವೆ. ಆಗಸ್ಟ್ 15ರಿಂದ ಬರುವ ವಿದ್ಯಾರ್ಥಿಗಳಿಗೂ ಸಂಪರ್ಕ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.

    ಈಗಾಗಲೇ ಶೇ.65ರಷ್ಟು ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ಸರಾಸರಿ ತೆಗೆದುಕೊಂಡರೆ ಶೇ.75ರಷ್ಟು ವಿದ್ಯಾರ್ಥಿಗಳು ವ್ಯಾಕ್ಸಿನ್ ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಶೀಘ್ರವೇ ನೀಡಲಾಗುವುದು. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಲಸಿಕೀಕರಣ ಭರದಿಂದ ಸಾಗುತ್ತಿದೆ ಎಂದರು.

    ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

    ಚಿಕ್ಕಮ್ಮನ ಮನೆಯಲ್ಲಿ ಜೋಕಾಲಿ ಆಟವಾಡುತ್ತಿದ್ದ ಬಾಲಕನ ಪ್ರಾಣವನ್ನೇ ಹೊತ್ತೊಯ್ದ ಜವರಾಯ!

    ಪದವಿ, ಡಿಪ್ಲೊಮಾ ಬಾಕಿ ಪರೀಕ್ಷೆಗೆ ಡೆಡ್​ಲೈನ್ ವಿಧಿಸಿದ ಡಿಸಿಎಂ

    ಪಕ್ಕದೂರಲ್ಲಿ 22 ವರ್ಷದ ಯುವತಿ ಸಾವು! ಶವದ ಪಕ್ಕದಲ್ಲೇ ಇತ್ತು ಆಸಿಡ್​, ಚಾಕು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts