ಕಾರು ಲಾರಿ ಮಧ್ಯೆ ಡಿಕ್ಕಿಯಾಗಿ ಮಹಿಳೆ ಸಾವು

Car Accident
Published on

ಭಟ್ಕಳ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಪಟ್ಟಣದ ಮೂಢ ಭಟ್ಕಳ ಬೈಪಾಸ್ ಬ್ರಿಜ್ ಬಳಿ ಮಂಗಳವಾರ ಸಂಭವಿಸಿದೆ.

ಉಡುಪಿ ಮೂಲದ ರೀಟಾ ಡಿಸೋಜಾ (51) ಮೃತ ಮಹಿಳೆ. ಜೇವಿಯರ್ ರಾಜ್ ಡಿಸೋಜಾ ಹಾಗೂ ಪುತ್ರಿ ಇನ್ರಿಕಾ ಗಾಯಗೊಂಡವರು. ಇವರು ಕಾರಿನಲ್ಲಿ ಕುಟುಂಬದವರೊಂದಿಗೆ ಉಡುಪಿ ಕಡೆಯಿಂದ ಗೋವಾ ಕಡೆಗೆ ಹೋಗುವಾಗ, ಮುರ್ಡೆಶ್ವರ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ತಕ್ಷಣ ಕಾರಿನಲ್ಲಿ ಸಿಲುಕಿ ಹಾಕಿಕೊಂಡ ಗಾಯಾಳುಗಳನ್ನು ಸ್ಥಳೀಯರು ರಕ್ಷಣೆ ಮಾಡಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯ ಪತಿ ಹಾಗೂ ಪುತ್ರಿಗೆ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net