ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು: ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಎದೆನೋವು ಕಾಣಿಸಿಕೊಂಡು ನಟ ಪುನೀತ್​ ರಾಜ್​ಕುಮಾರ್​ ಹೃದಯಸ್ತಂಭನದಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಶನಿವಾರ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗಲೇ 35 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಜಿಮ್​ಗೆ ಹೋಗುವವರಲ್ಲಿ ಆತಂಕ ಹೆಚ್ಚಿಸಿದೆ. ಮಂಗಳೂರು ಮೂಲದ ವಿನಯಾ ವಿಠಲ್​ (35) ಮೃತ ಮಹಿಳೆ. ಪ್ರಾಥಮಿಕ ಮಾಹಿತಿ ಪ್ರಕಾರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅವಿವಾಹಿತೆಯಾಗಿದ್ದ ವಿನಯಾ, ಮಲ್ಲೇಶಪಾಳ್ಯದ ಬಾಡಿಗೆ ಮನೆಯಲ್ಲಿ 2 ವರ್ಷದಿಂದ ಒಂಟಿಯಾಗಿ ವಾಸವಿದ್ದರು. … Continue reading ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ