ಹಳ್ಳಕ್ಕೆ ಉರುಳಿ ಬಿದ್ದ ಬಸ್​; ಮಹಿಳೆ ಸಾವು…5 ಮಂದಿ ಸ್ಥಿತಿ ಗಂಭೀರ

accident
Published on

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಹೊರಟ್ಟಿದ್ದ ಪ್ರವಾಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 5 ಮಂದಿ ಸ್ಥಿತಿ ಗಂಭೀರವಾಗಿದೆ.

ಸುರೇಖಾ (45) ಮೃತ ಮಹಿಳೆ. ಬೆಂಗಳೂರಿನ ಯಲಹಂಕ ನಿವಾಸಿಯಾಗಿದ್ದರು. ಬೇಲೂರು-ಮೂಡಿಗೆರೆ ತಾಲೂಕಿನ ಗಡಿ ಗ್ರಾಮ ಚೀಕನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.

ಕಳೆದ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್ ಶನಿವಾರ (ನ.4) ಬೆಳಗ್ಗಿನ ಜಾವ 4.45ಕ್ಕೆ ಚೀಕನಹಳ್ಳಿ ಬಳಿ ಬರುತ್ತಿದ್ದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಈ ಬಸ್ಸ್​​ನಲ್ಲಿದ್ದವರು ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು, ಶೃಂಗೇರಿಗೆ ಪ್ರವಾಸಕ್ಕೆ ಹೊರಟಿದ್ದರು ಎನ್ನಲಾಗಿದೆ.

ಬಸ್ಸಿನಲ್ಲಿ ರಾಜನಗುಂಟೆ ಹಾಗೂ ಕೆ.ಆರ್.ಪುರಂನ 48ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನ ಹಾಸನ ಜಿಲ್ಲೆಯ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net