

ಚಿತ್ರದುರ್ಗ: ಕಲುಷಿತ ನೀರು ಕುಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮಂಜುಳಾ (32) ಮೃತ ಮಹಿಳೆ. ಸೃಷ್ಟಿ (18) ಸ್ಥಿತಿ ಗಂಭೀರವಾಗಿದೆ. ಈಕೆಗೆ ಉನ್ನತ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 8 ಮಕ್ಕಳು ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ವಾರ್ಡನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರ ಸ್ಥಿತಿ ಗಂಭೀರ ಎಂದು ವೈದ್ಯರು ಹೇಳಿದ್ದಾರೆ.