ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

Rape
Published on

ಪಾಟ್ನಾ: ದೇಶವನ್ನೇ ಬೆಚ್ಚಿ ಬೀಳಿಸುವಂತಹ ಅಮಾನವೀಯ ಕೃತ್ಯ ಮಂಗಳವಾರ ಬೆಳಗ್ಗೆ ಬಿಹಾರದ ಸಮಷ್ಟಿಪುರ ಜಿಲ್ಲೆ ವಿಭೂತಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಮಲವಿಸರ್ಜನೆಗೆಂದು ಮನೆಯಿಂದ ಹೊರ ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು, ಆಕೆಯನ್ನ ಬೆತ್ತಲೆ ಸ್ಥಿತಿಯಲ್ಲೇ ಕಂಬಕ್ಕೆ ಕಟ್ಟಿ ನೇತು ಹಾಕಿ ವಿಕೃತಿ ಮೆರೆದಿದ್ದಾರೆ.

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮನೆಯಲ್ಲಿ ಮದುವೆ ಸಮಾರಂಭ ಇತ್ತು. ಅದಕ್ಕಾಗಿ ಮನೆಯವರು ಸಿದ್ಧತೆಯಲ್ಲಿ ತೊಡಗಿದ್ದರು. ಅತ್ತ ಆ ಮನೆಯ ಸೊಸೆ ಮಲವಿಸರ್ಜನೆಗೆಂದು ಮನೆಯಿಂದ ಹೊರ ಹೋಗಿದ್ದರು. ಅಲ್ಲಿಗೆ ಬಂದ ಕಾಮುಕರು ಅತ್ಯಾಚಾರವೆಸಗಿದ್ದಾರೆ. ಪ್ರಜ್ಞೆ ತಪ್ಪಿದ ಮಹಿಳೆಯನ್ನ ಬೆತ್ತಲೆ ಸ್ಥಿತಿಯಲ್ಲೇ ವಿದ್ಯುತ್​ ಕಂಬಕ್ಕೆ ಕಟ್ಟಿ ನೇತು ಹಾಕಿ ಪರಾರಿಯಾಗಿದ್ದಾರೆ. ಬೆಳಕಾಗುತ್ತಿದ್ದಂತೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಇಡೀ ಊರಿಗೆ ಊರೇ ಬೆಚ್ಚಿಬಿದ್ದಿದೆ. ಕೂಡಲೇ ಸಂತ್ರಸ್ತೆಯನ್ನ ಕಂಬದಿಂದ ಕೆಳಗಿಳಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದುವೆ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕರೇ ಮಹಿಳೆಯನ್ನ ಹಿಂಬಾಲಿಸಿಕೊಂಡು ಅತ್ಯಾಚಾರವೆಸಗಿ, ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನೂ ಕಸಿದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ 6 ಜನರನ್ನ ಪೊಲೀಸರು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net