More

    ಮಹಿಳೆಯನ್ನು ಎಲ್ಲರೂ ಗೌರವಿಸಬೇಕು

    ಚಿಕ್ಕಮಗಳೂರು: ಹೆಣ್ಣು ಎಂದರೆ ತಾಯಿ, ಸಹೋದರಿ, ಮಡದಿ ಹೀಗೆ ಪ್ರತಿ ಪುರುಷನ ಬದುಕಿನಲ್ಲಿ ಅವಿಭಾಜ್ಯ ಅಂಗವಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಹೆಣ್ಣನ್ನು ಪ್ರತಿಯೊಬ್ಬರೂ ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಉಪಾಧ್ಯಕ್ಷ ಎ.ಎನ್.ಮಹೇಶ್ ತಿಳಿಸಿದರು.

    ನಗರದ ಬೇಲೂರು ರಸ್ತೆ ಸಮೀಪದ ಎಸ್‌ಟಿಜೆ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಗುರಿಯೊಂದಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ. ವಿದ್ಯಾರ್ಥಿನಿಯರು ಸಾಧನೆಗೆ ಮನಸ್ಸು ಮಾಡಬೇಕು. ಹೆಣ್ಣು ಮಕ್ಕಳ ಕನಸುಗಳನ್ನು ನಾವೆಲ್ಲರೂ ಗೌರವಿಸಬೇಕು ಎಂದು ತಿಳಿಸಿದರು.
    ಮಹಿಳೆ ಮನೆಯ ಆಧಾರ ಸ್ತಂಬವಿದ್ದಂತೆ. ಶಿಕ್ಷಕಿಯರಿದ್ದರೆ ಶಾಲೆ ಚೆನ್ನಾಗಿ ನಡೆಯುತ್ತದೆ. ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿ ಇರುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದರು.
    ತಂದೆ, ತಾಯಿಯೇ ದೇವರು ಎಂಬುದು ನಮ್ಮ ಸಂಸ್ಕೃತಿ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ. ಲಿಂಗ ಅಸಮಾನತೆಯ ಮನೋಧರ್ಮ ಬದಲಾಗಬೇಕು. ಗಂಡು-ಹೆಣ್ಣು ಎಂಬ ಭೇದ ಮಾಡದೆ ಇಬ್ಬರನ್ನೂ ಸಮಾನವಾಗಿ ಕಾಣಬೇಕು ಎಂದು ತಿಳಿಸಿದರು.
    ಎಸ್‌ಟಿಜೆ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಚಾರ್ಯೆ ಭಾರತಿ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆಯುಕ್ತ ಎಂ.ಎನ್.ಷಡಕ್ಷರಿ, ಎಸ್‌ಟಿಜೆ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಸಂತೋಷ್‌ಕುಮಾರ್, ಸ್ವಯಂ ಸೇವಕಿ ಕೆ.ಆರ್.ಜಯಶೀಲಾ, ಭಾರತೀಯ ಅಂಚೆ ಇಲಾಖೆ ಅಧಿಕಾರಿ ಸುನಂದಾ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಘಟನಾ ಆಯುಕ್ತ ಕಿರಣ್‌ಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts