ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ತೊಳಸಿಕೆರೆ ಗ್ರಾಮಕ್ಕೆ ತೆರಳುವ ಅರಣ್ಯ ಪ್ರದೇಶದಲ್ಲಿ ಗುರುವಾರ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮ. ಬೆಟ್ಟದ ಜನತಾ ಕಾಲನಿ ನಿವಾಸಿ ಐಶ್ವರ್ಯಾ (24) ಅನುಮಾನಾಸ್ಪದವಾಗಿ ಮೃತಪಟ್ಟವರು. ಇವರು ಕಳೆದ 3 ವರ್ಷದ ಹಿಂದೆ ರಾಮಾಪುರದಿಂದ ಜನತಾ ಕಾಲನಿ ನಿವಾಸಿ ಮಾದೇಶ್ ಎಂಬುವರೊಂದಿಗೆ ವಿವಾಹವಾಗಿದ್ದರು. ಕಳೆದ 20 ದಿನಗಳ ಹಿಂದೆ ಕಾಣೆಯಾಗಿದ್ದರು. ಈ ಸಂಬಂಧ ಪತಿ ಮಾದೇಶ್ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಬೆಳಗ್ಗೆ ಈಕೆಯ ಮೃತ ದೇಹ ಅರಣ್ಯ ಪ್ರದೇಶದ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ತಹಸೀಲ್ದಾರ್ ವೈ.ಕೆ. ಗುರುಪ್ರಸಾದ್ ಹಾಗೂ ಇನ್ಸ್‌ಪೆಕ್ಟರ್ ಜಗದೀಶ್ ಭೇಟಿ ನೀಡಿ ಮಹಜರು ನಡೆಸಿದರು. ಬಳಿಕ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.