ಪಡುಬಿದ್ರಿ: ಕಾಪು ಮಾರಿಯಮ್ಮ ದೇವಸ್ಥಾನದ ಚಿತ್ರಣವೇ ಬದಲಾಗಿದೆ. ಭಕ್ತರೆಲ್ಲರ ಸಹಕಾರದೊಂದಿಗೆ ಸಂಪೂರ್ಣ ಶಿಲಾಮಯವಾಗಿ, ಅತ್ಯದ್ಭುತವಾಗಿ ನಿರ್ಮಾಣಗೊಂಡ ಮಾರಿಗುಡಿ ಜಗದಗಲದ ಭಕ್ತರ ಶ್ರದ್ಧಾಕೇಂದ್ರವಾಗಿ ಮೂಡಿ ಬರುವಂತಾಗಲಿ ಎಂದು ಮನಿಲಾ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಸಲಹೆಗಾರ ಪೊನ್ನುರಾಜು ಹೇಳಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ, ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಅವರಿಂದ ದೇವಿಯ ಪ್ರಸಾದ ಸ್ವೀಕರಿಸಿ, ಬಳಿಕ ಜೀರ್ಣೋದ್ಧಾರ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.
ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಕೆ., ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮನೋಹರ ಶೆಟ್ಟಿ ಕಾಪು, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ವಿಜಯಲಕ್ಷ್ಮೀ ಶೆಟ್ಟಿ, ಚರಿತಾ ಶಶಿಧರ ದೇವಾಡಿಗ, ನವದುರ್ಗಾ ಲೇಖನ ಸಮಿತಿ ಮಹಿಳಾ ಸಂಚಾಲಕಿ ಗೀತಾಂಜಲಿ ಸುವರ್ಣ, ಸ್ವರ್ಣ ಸಮರ್ಪಣಾ ಸಮಿತಿ ಕಚೇರಿ ಸಂಚಾಲಕ ಜಯರಾಮ ಆಚಾರ್ಯ, ರಘುರಾಮ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ದನ್ ಕಾಪು ಉಪಸ್ಥಿತರಿದ್ದರು.