More

    ಮಹಿಳೆಯನ್ನ ನಗ್ನಗೊಳಿಸಿ ಹಿಂಸಿಸಿದ್ದ ಕೇಸ್​ಗೆ ಬಿಗ್​ ಟ್ವಿಸ್ಟ್​! ಆಕೆಯ ಕಾಟ ತಡೆಯಲಾಗದೆ ಹಾಗೇ ಮಾಡಿದ್ವಿ…

    ಯಾದಗಿರಿ: ಮಹಿಳೆಯನ್ನ ವಿವಸ್ತ್ರಗೊಳಿಸಿ ಅಂಗಾಂಗ ಮುಟ್ಟಿ ಆಕೆಗೆ ಮನಬಂದಂತೆ ಥಳಿಸಿ ವಿಡಿಯೋ ಚಿತ್ರೀಕರಿಸಿದ್ದ ಪ್ರಕರಣ ಮತ್ತೊಂದು ತಿರುವು ಪಡೆದಿದೆ.

    ಯಾದಗಿರಿಯ ಚಟ್ನಳ್ಳಿ ಹಾಗೂ ಹಳಿಸಗರ ಗ್ರಾಮದ ನಡುವಿನ ಸುತ್ತಮುತ್ತ ಈ ಘಟನೆ ಕೆಲ ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಗೆ ಹಿಂಸಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಈಗಾಗಲೇ ನಾಲ್ವರು ಆರೋಪಿಗಳನ್ನು ಸಹಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಮಹಿಳೆ ಹನಿಟ್ರ್ಯಾಪ್ ಮಾಡುತ್ತಿದ್ದಳು. ಹಣದ ಆಮಿಷವೊಡ್ಡಿ ಮಾನಸಿಕ ಹಿಂಸೆ ನೀಡುತ್ತಿದ್ದಳು. ಈ ಕಾರಣಕ್ಕೆ ಆಕೆಯನ್ನ ಕರೆಸಿಕೊಂಡು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾಗಿ ಆರೋಪಿಗಳು ಹೇಳಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಹೆಚ್ಚಿನ ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.

    ಈ ಪ್ರಕರಣ ಸಂಬಂಧ ನಿಂಗರಾಜ ದೋರನಹಳ್ಳಿ, ಭೀಮಾಶಂಕರ ಹಳಿಸಗರ, ಅಯ್ಯಪ್ಪ ಮಮದಾಪುರ ಹಾಗೂ ಶರಣು ಎಂಬುವವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ನಿಮ್ಮ ಕಾಲಿಗೆ ಬೀಳ್ತೀನಿ, ಪ್ಲೀಸ್​ ಬಿಟ್ಬಿಡಿ ಎಂದು ಅಂಗಲಾಚಿದ್ರೂ ನಗ್ನಗೊಳಿಸಿ ಅಂಗಾಂಗ ಮುಟ್ಟಿ ಮನಬಂದಂತೆ ಥಳಿಸಿದ್ರು…

    ಚಿಂತಾಮಣಿಯಲ್ಲಿ ಭೀಕರ ಅಪಘಾತ, 8 ಮಂದಿ ಸಾವು: ಒಬ್ಬೊಬ್ಬರ ಹಿಂದಿದೆ ಕರುಣಾಜನಕ ಕಥೆ

    ತುಮಕೂರಲ್ಲಿ ಗಂಡನನ್ನ ಕೊಂದು ಚರಂಡಿಗೆ ಎಸೆದ ಪತ್ನಿ! ಬೆಚ್ಚಿಬೀಳಿಸುತ್ತೆ ಅವಳ ಕ್ರೂರತನ

    ಹುಣಸೂರಲ್ಲಿ ಮಗನ ಜತೆ ಚಿಕ್ಕಮ್ಮನ ಕಾಮದಾಟ! ಗುಟ್ಟು ರಟ್ಟಾಗುತ್ತಿದ್ದಂತೆ ನಡೆದೇ ಹೋಯ್ತು ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts