More

    ಬಿಎಸ್​ವೈ ಅಭಿಮಾನಿ ಆತ್ಮಹತ್ಯೆ: ಅಭಿಮಾನ ಅತಿರೇಕಕ್ಕೆ ಹೋಗದಿರಲಿ ಎಂದು ಕೈಮುಗಿದ ಯಡಿಯೂರಪ್ಪ

    ಗುಂಡ್ಲುಪೇಟೆ: ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ… ಎಂದು ಹಂಗಾಮಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮನವಿ ಮಾಡಿದ್ದಾರೆ.

    ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಕಣ್ಣೀರಿಟ್ಟಿದ್ದಕ್ಕೆ ಮನನೊಂದಿದ್ದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮ ರವಿ (35) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸುದ್ದಿ ಕೇಳಿದ ಯಡಿಯೂರಪ್ಪ, ”ನನ್ನ ರಾಜೀನಾಮೆಯಿಂದ ಮನನೊಂದ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ…” ಎಂದು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

    ರವಿ ಹೋಟೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದ. ಬಿ.ಎಸ್.ಯುಡಿಯೂರಪ್ಪ ಮೇಲೆ‌ ರವಿ ಇಟ್ಟಿದ್ದ ಅಭಿಮಾನ‌ ಕಂಡು ಊರಿನ‌ ಜನ ಅವನನ್ನು ರಾಜಾಹುಲಿ ಎಂದೇ ಕರೆಯುತ್ತಿದ್ದರು. 2017ರಲ್ಲಿ ನಡೆದ ಉಪಚುನಾವಣೆಗೆ ಹಾಲಿ ಶಾಸಕ ನಿರಂಜನ್ ಕುಮಾರ್ ಪರ ಬಿ.ಎಸ್.ಯಡಿಯೂರಪ್ಪ ಪ್ರಚಾರ ಮಾಡಲು ಗುಂಡ್ಲುಪೇಟೆಗೆ ಆಗಮಿಸಿದ್ದರು.‌ ಈ ವೇಳೆ ಅವರ ಜತೆಗೆ ರವಿ ಊರುಕೇರಿಗಳನ್ನು ಸುತ್ತಿದ್ದ. ಮಾತು ಮಾತಿಗೂ ಯಡಿಯೂರಪ್ಪ ಜಪ‌ಮಾಡುತ್ತಿದ್ದ. ಸಿಎಂ ಸ್ಥಾನಕ್ಕೆ ರಾಜೀನಾಮೆ ‌ನೀಡಿದಾಗ ಯಡಿಯೂರಪ್ಪ ಸುರಿದ ಕಣ್ಣೀರನ್ನು ಕಂಡು ಮನನೊಂದು‌ ಆತ್ಮಹತ್ಯೆ ‌ಮಾಡಿಕೊಂಡಿದ್ದಾನೆ.

    ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ! ಕೊನೇ ಕ್ಷಣದಲ್ಲಿ ಅಧಿಕೃತ ಆದೇಶ

    VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts