More

    ರಸ್ತೆ ಅಪಘಾತದಲ್ಲಿ ಯುವಕ ಸಾವು

    ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ ಗೌಡರ ಪುತ್ರರಾಗಿರುವ ಇವರು ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಸಂಚರಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಮಂಗಳವಾರ ಇನ್ನೋವಾ ಕಾರು ಬಡಿದು ತಲೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳುಂಟಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು. ಅವಿವಾಹಿತರಾಗಿದ್ದ ಅವರು ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts