ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್‌ಗೆ ಬೆಂಕಿ ಹಂಚಿದ ಯುವಕ!

bike
Published on

ಬೆಂಗಳೂರು: ವಿಧಾನಸೌಧ ಮುಂದೆಯೇ ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ.

ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಕಿ ಹಚ್ಚಲು ಕಾರಣವೇನು?: ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್ದ. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net