ಮದ್ಯ ಖರೀದಿಗೆ ಇನ್ನು ಮುಂದೆ ಆಧಾರ್​ ಕಾರ್ಡ್​ ಕಡ್ಡಾಯ; ಸುದ್ದಿ ಕೇಳಿ ಕಂಗಾಲಾದ ಮದ್ಯ ಪ್ರಿಯರು!

Latest News

ಎನ್​ಆರ್​ಸಿ ದೇಶಕ್ಕೆ ವಿಸ್ತರಣೆ: ಸಂಸತ್ತಿನಲ್ಲಿ ಅಮಿತ್ ಷಾ ಘೋಷಣೆ

ನವದೆಹಲಿ:ದೇಶಾದ್ಯಂತ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್​ಆರ್​ಸಿ) ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿ, ದೇಶಾದ್ಯಂತ ಎನ್​ಆರ್​ಸಿ ನಡೆಸಲು...

ನಷ್ಟ ಕಡಿಮೆ ಮಾಡಿದರೆ ಲಾಭ ಸಾಧ್ಯ

ಕೊಪ್ಪಳ: ದಾಳಿಂಬೆ ಬೆಳೆಯಲ್ಲಿ ರೈತರು ಶೇ.35 ನಷ್ಟ ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಂಡಲ್ಲಿ ಹೆಚ್ಚಿನ ಆದಾಯ ಪಡೆಯಬಹುದೆಂದು ಭಾರತೀಯ ದಾಳಿಂಬೆ ಬೆಳೆಗಾರರ ಸಂಘದ...

ಜನಜಾಗೃತಿ ಅಭಿಯಾನಕ್ಕೆ ಅಭಿನವ ಗವಿಶ್ರೀ ಚಾಲನೆ

ಕಾರಟಗಿ: ಪಟ್ಟಣದಲ್ಲಿ ಜೆಸ್ಕಾಂನಿಂದ ಹಮ್ಮಿಕೊಂಡಿದ್ದ ವಿದ್ಯುತ್ ಅಪಾಯಗಳನ್ನು ತಪ್ಪಿಸುವ ಸುರಕ್ಷತಾ ಜನಜಾಗೃತಿ ಅಭಿಯಾನಕ್ಕೆ ಗವಿಮಠದ ಅಭಿನವ ಗವಿಶ್ರೀಗಳು ಬುಧವಾರ ಚಾಲನೆ ನೀಡಿದರು. ಜೆಸ್ಕಾಂನ ಇಇ...

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮಂಡ್ಯ: ಮದ್ಯ ಖರೀದಿಗೆ ಇನ್ನು ಮುಂದೆ ಆಧಾರ್​ ಕಾರ್ಡ್ ಬೇಕಂತೆ. ಸರ್ಕಾರ ಆಧಾರ್​ ಕಾರ್ಡ್​ ಇದ್ದರೆ ಮಾತ್ರ ಮದ್ಯ ಮಾರಾಟ ಮಾಡುವಂತೆ ಆದೇಶ ಹೊರಡಿಸಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಮದ್ಯ ಪ್ರಿಯರು ಕಂಗಾಲಾಗಿದ್ದಾರೆ.

ಮದ್ಯದ ಬಾಟಲ್​ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಾರಿ ತೆಗೆದುಕೊಂಡು ಹೋದ ಮದ್ಯದ ಬಾಟಲಿಯನ್ನು ವಾಪಸ್​ ತಂದು ಕೊಟ್ಟವರಿಗೆ ಮಾತ್ರ ಮದ್ಯ ನೀಡುವುದು. ಇದಕ್ಕಾಗಿ ಮದ್ಯ ಖರೀದಿಸುವವರ ಆಧಾರ್​ ಕಾರ್ಡ್​ ಮಾಹಿತಿಯನ್ನು ಪಡೆದುಕೊಳ್ಳಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಾಯೋಗಿಕವಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ವಲಯದಲ್ಲಿ ಜಾರಿಗೆ ತರಲು ಚಿಂತಿಸಲಾಗಿದೆ ಎಂಬ ಸುದ್ದಿಯನ್ನು ಹಬ್ಬಿಸಲಾಗಿದೆ. ಇದಕ್ಕೆ ಪೂರಕವಾಗಿ ಮಳವಳ್ಳಿ ವಲಯ ಅಬಕಾರಿ ನಿರೀಕ್ಷಕರು ಬರೆದಿರುವ ಪತ್ರವನ್ನೂ ವೈರಲ್​ ಮಾಡಲಾಗಿದೆ.

ಸಂಸ್ಥೆಯೊಂದು ಅಬಕಾರಿ ಇಲಾಖೆಗೆ ಪತ್ರ ಬರೆದು ಆಧಾರ್ ಮಾಹಿತಿ ದಾಖಲಿಸಿಕೊಂಡ ಬಳಿಕವೇ ಮದ್ಯ ನೀಡಬೇಕು. ಎರಡನೇ ಬಾರಿ ಮದ್ಯ ಖರೀದಿಸಲು ಬಂದಾಗ ಹಳೆಯ ಬಾಟಲ್ ಅಂಗಡಿಗೆ ನೀಡಲೆಬೇಕು. ಎಲ್ಲೆಂದರಲ್ಲಿ ಬಿದ್ದಿರುವ ಖಾಲಿ ಬಾಟಲ್ ಮೇಲಿನ ಬಾರ್​ಕೋಡ್​ ಮಾಹಿತಿ ಆಧರಿಸಿ ಅದನ್ನು ಮಾರಾಟ ಮಾಡಿದ ಮದ್ಯದಂಗಡಿ ಮಾಲೀಕರಿಗೆ ದಂಡ ಅಥವಾ ಲೆಸೆನ್ಸ್ ಕ್ಯಾನ್ಸೆಲ್ ಮಾಡುವ ಚಿಂತಿಸಬೇಕು. ಕುಡುಕರ ಕುಟುಂಬಕ್ಕೆ ಕ್ಷೇಮಾಭಿವೃದ್ಧಿ ಹಣ ಮೀಸಲಿಡಬೇಕು. ಕುಡಿತ ಮತ್ತಲ್ಲಿ ಸಾರ್ವಜನಿಕವಾಗಿ ಬಿದ್ದಿರುವ ವ್ಯಕ್ತಿಯನ್ನು ಅಬಕಾರಿ ಇಲಾಖೆ ವಾಹನದಲ್ಲಿ ಸುರಕ್ಷಿತವಾಗಿ ಕರೆದೊಯ್ದು ಬಿಡಬೇಕು. ದುಡಿದ ಎಲ್ಲಾ ಹಣವನ್ನು ಕುಡಿತಕ್ಕೆ ಖರ್ಚು ಮಾಡಿದರೇ, ಆತನ ಕುಟುಂಬಕ್ಕೆ ಸಹಾಯ ಮಾಡಬೇಕು. ದಿನನಿತ್ಯದ ದಿನಸಿ ಸಾಮಾಗ್ರಿಗಳನ್ನು ಅಬಕಾರಿ ಇಲಾಖೆ ಮೂಲಕ ಉಚಿತವಾಗಿ ನೀಡಬೇಕು. ಕುಡುಕರ ಆರೋಗ್ಯ ಹಾಳಾದರೆ ಅವರ ಆರೋಗ್ಯ ತಪಾಸಣೆ, ಚಿಕಿತ್ಸೆ ವೆಚ್ಚ ಅಬಕಾರಿ ಇಲಾಖೆ ಭರಿಸಬೇಕು ಎಂದು ಸಲಹೆ ನೀಡಿತ್ತು.

ಈ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಮಳವಳ್ಳಿ ವಲಯ ಅಬಕಾರಿ ನಿರೀಕ್ಷಕರು ನಿಮ್ಮ ಸಲಹೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅವರ ನಿರ್ದೇಶನದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಪತ್ರ ಆಧರಿಸಿ ಮದ್ಯ ಖರೀದಿಗೆ ಆಧಾರ್​ ಕಾರ್ಡ್​ ಕಡ್ಡಾಯ ಎಂಬ ಸುದ್ದಯನ್ನು ಹರಿಬಿಡಲಾಗಿದೆ.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...