ಸುಳ್ಯ: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ, ಉಪವಿಭಾಗ ಸುಳ್ಯ ಮತ್ತು ಬೆಳ್ಳಾರೆಯ ಜ್ಞಾನದೀಪ ಎಜುಕೇಶನಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಆಗಸ್ಟ್ 1ರಂದು ಬೆಳ್ಳಾರೆಯ ಗ್ರಾಪಂ ಕಟ್ಟಡದ ರಾಜೀವ ಗಾಂಧೀ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಹೊಸ ಆಧಾರ್ ನೋಂದಣಿ, ಆಧಾರ್ ತಿದ್ದುಪಡಿ ಮತ್ತು ಅಪ್‌ಡೇಟ್ ಸೇವೆಗಳು ಶಿಬಿರದಲ್ಲಿ ನಡೆಯಲಿದ್ದು, ಸಮಗ್ರ ರಕ್ಷಾ ಯೋಜನೆ ಅಪಘಾತ ವಿಮೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಹರೀಶ್ ಜಿ.ಅಭಿಯಾನ ಉದ್ಘಾಟಿಸಲಿದ್ದಾರೆ. ಆಧಾರ್ ನೋಂದಣಿ ಮತ್ತು ತಿದ್ದುಪಡಿ ಮಾಡಲಿಚ್ಚಿಸುವವರು ಜುಲೈ 31ರೊಳಗೆ ಬೆಳ್ಳಾರೆಯ ಬಸ್ ನಿಲ್ದಾಣದ ಎದುರಿನ ಜ್ಞಾನದೀಪ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿ ಅರ್ಜಿ ಪಡೆದುಕೊಳ್ಳುವುದು. 1ರಂದು ಬೆಳಗ್ಗೆ 9ರಿಂದ 10ರವರೆಗೆ ಟೋಕನ್ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಆ.1ರಂದು ಆಧಾರ್ ತಿದ್ದುಪಡಿ, ನೋಂದಣಿ
ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..
ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…
ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್ ಎಂದು ಬಿಸಾಡೋ ಬದಲು ಹೀಗೆ ಮಾಡಿ
ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…
ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…