ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ ಉದ್ಘಾಟನೆ

02
Published on

ಮೂಡುಬಿದಿರೆ: ಇಲ್ಲಿನ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ, ಇನ್ನರ್ ವೀಲ್ ಕ್ಲಬ್, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಸಂಯುಕ್ತ ಆಶ್ರಯದಲ್ಲಿ ಆಧಾರ ನೋಂದಣಿ, ತಿದ್ದುಪಡಿ, ಆರೋಗ್ಯ ಮತ್ತು ಅಪಘಾತ ವಿಮಾ ಶಿಬಿರ ಆಯೋಜಿಸಲಾಯಿತು.

ಎಂಸಿಎಸ್ ಸೊಸೈಟಿ ಅಧ್ಯಕ್ಷ ಬಾಹುಬಲಿ ಪ್ರಸಾದ್ ಶಿಬಿರ ಉದ್ಘಾಟಿಸಿ, ಸೊಸೈಟಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಸೊಸೈಟಿ ನೌಕರರಿಗೆ ಆರೋಗ್ಯ ಮತ್ತು ಅಪಘಾತ ವಿಮೆಯ ಸೌಲಭ್ಯವನ್ನೂ ನೀಡುತ್ತಿದೆ. ಸದಸ್ಯರಿಗೂ ಕೂಡ ಅಂಥ ಅವಕಾಶ ಮಾಡಿಕೊಟ್ಟಿದೆ ಎಂದರು.

ಅಂಚೆ ಇಲಾಖೆಯ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಗುರುಪ್ರಸಾದ್, ವಿವಿಧ ಸೌಲಭ್ಯಗಳ ಮಾಹಿತಿ ನೀಡಿದರು. ನಿರ್ದೇಶಕರಾದ ಜಯರಾಮ ಕೋಟ್ಯಾನ್, ಪ್ರೇಮಾ ಸಾಲ್ಯಾನ್, ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ., ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಜೈನ್, ಕಾರ್ಯದರ್ಶಿ ಅನಿತಾ ಉಪಸ್ಥಿತರಿದ್ದರು. ನಿವೃತ್ತ ಪ್ರಾಂಶುಪಾಲ ಪದ್ಮನಾಭ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net