More

    ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಶೀಘ್ರವೇ ಸಿಎಂ ಬದಲಾವಣೆ ಎಂದ ಆದಿತ್ಯ ಠಾಕ್ರೆ

    ಮುಂಬೈ: ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೂ ಮೊದಲು, ಮುಖ್ಯಮಂತ್ರಿ ಏಕನಾಥ್ ಶಿಂಧೆಯ ಸಿಎಂ ಸ್ಥಾನಕ್ಕೆ ಕುತ್ತು ಬರಬಹುದು. ಶಿಂಧೆಗೆ ರಾಜಿನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಮಾಜಿ ಸಚಿವ ಆದಿತ್ಯ ಠಾಕ್ರೆ ಹೇಳಿದ್ದಾರೆ.

    ಇದನ್ನೂ ಓದಿ: ರಾಸಾಯನಿಕ ಶಸ್ತ್ರಾಸ್ತ್ರ ಮುಕ್ತ ಜಗತ್ತಿಗಾಗಿ, ತನ್ನ ಯುದ್ಧ ಸಾಮಗ್ರಿ ನಾಶಪಡಿಸಿದ ಅಮೇರಿಕಾ

    ಈ ಕುರಿತು ಮಾತನಾಡಿದ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ರಾಜೀನಾಮೆ ನೀಡುವಂತೆ ಹೇಳಲಾಗಿದ್ದು, ಮಹಾರಾಷ್ಟ್ರ ಸರ್ಕಾರದಲ್ಲಿ ಸ್ವಲ್ಪ ಬದಲಾವಣೆಯಾಗಬಹುದು ಎಂಬ ಮಾಹಿತಿ ತಮಗೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

    ಅಜಿತ್ ಪವಾರ್ ಮತ್ತು ಇತರ ಎಂಟು ಎನ್‌ಸಿಪಿ ಶಾಸಕರು ಶಿಂಧೆ ಸರ್ಕಾರಕ್ಕೆ ಬೆಂಬಲವನ್ನು ನೀಡಿ ಸಚಿವರಾಗಿದ್ದಾರೆ. ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅಜಿತ್ ಪವಾರ್ ಪ್ರಸ್ತುತ ಉಪಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಶಿಂಧೆ ಅವರ ಮುಖ್ಯಮಂತ್ರಿ ಕುರ್ಚಿಗೆ ಅಪಾಯ ಎದುರಾಗಬಹುದು ಠಾಕ್ರೆ ಹೇಳಿದ್ದಾರೆ.

    ಇದನ್ನೂ ಓದಿ: ಟ್ರಾಯ್​​​ನಿಂದ ವಾಟ್ಸ್​​​​ಆ್ಯಪ್​, ಟೆಲಿಗ್ರಾಮ್​ ಹಾಗೂ ಒಟಿಟಿ ಆ್ಯಪ್​ಗಳಿಗೆ ಕಡಿವಾಣ..?

    ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಬಂಡಾಯಗಾರ ಅಜಿತ್ ಪವಾರ್ ಮತ್ತು ಅವರ ಅನುಯಾಯಿಗಳು ಸರ್ಕಾರಕ್ಕೆ ಸೇರ್ಪಡೆಗೊಂಡ ನಂತರ ಬಿಜೆಪಿ ಏಕನಾಥ್ ಶಿಂಧೆ ಗುಂಪನ್ನು ಬದಿಗೊತ್ತುತ್ತಿದೆ ಎಂಬ ವರದಿಗಳ ಮಧ್ಯೆ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ.

    ಅಜಿತ್ ಪವಾರ್ ಡಿಸಿಎಂ ಆದ ನಂತರ ಶಿಂಧೆ ಬಣದ ಕೆಲವು ನಾಯಕರು ಕೋಪಗೊಂಡಿದ್ದಾರೆ ಎಂದು ಶಿವಸೇನೆಯ ಹಿರಿಯ ನಾಯಕರೊಬ್ಬರು ಇತ್ತೀಚೆಗೆ ಹೇಳಿಕೊಂಡಿದ್ದರು. ಜತೆಗೆ, ಶಿಂಧೆ ಪಾಳೆಯದ 17-18 ಶಾಸಕರು ನಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಸಂಜಯ್ ರಾವತ್ ಕೂಡ ಹೇಳಿದ್ದರು.(ಏಜೆನ್ಸೀಸ್​​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts