ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಪಡೆದುಕೊಂಡ ಆಡುಜೀವಿತಂ; ಎರಡನೇ ದಿನ ಗಳಿಸಿದ್ದೆಷ್ಟು?

Aadujeevitham

ನವದೆಹಲಿ: ಪೃಥ್ವಿರಾಜ್​ ಸುಕುಮಾರ್​ ನಟನೆಯ ಬ್ಲೆಸ್ಸಿ ನಿರ್ದೇಶನದ ಆಡುಜೀವಿತಂ ಚಿತ್ರವು ಮಾರ್ಚ್​ 28ರಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾಗೆ ಬುಕ್​ ಮೈ ಶೋನಲ್ಲಿ 9.5 ರೇಟಿಂಗ್​ ದೊರೆತ್ತಿದ್ದು, ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ.

ಮಾರ್ಚ್​ 28ರಂದು ಬಿಡುಗಡೆಯಾ ಚಿತ್ರವು ಮೊದಲ ದಿನ 7.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಎರಡನೇ ದಿನ ಚಿತ್ರದ ಗಳಿಕೆ 6.50 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಎರಡು ದಿನದಲ್ಲಿ ಒಟ್ಟಾರೆ ಕಲೆಕ್ಷನ್ 14.10 ಕೋಟಿ ರೂಪಾಯಿ ದಾಟಿದೆ. ಮಾಲಿವುಡ್​ನಲ್ಲಿ 11.82 ಕೋಟಿ ರೂಪಾಯಿ ಗಳಿಕೆಯಾಗಿದ್ದು ಕನ್ನಡದಲ್ಲಿ 90 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಆಡುಜೀವಿತಂ ಚಿತ್ರವು ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ  ಆಧರಿಸಿ ಮಾಡಿರುವ ಸಿನಿಮಾ ಆಗಿದೆ. 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಆಧರಿಸಿ ಆಡುಜೀವಿತಂ ಚಿತ್ರ ಮಾಡಲಾಗಿದೆ.

Share This Article

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…