More

    ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್..! ಕಾರಣ ಹೀಗಿದೆ?

    ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ವಿರುದ್ಧ ಬಾಲಿವುಡ್ ನಟ ಅಮೀರ್ ಖಾನ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

    ಇದನ್ನೂ ಓದಿ: ದೇವೇಗೌಡರಿಗೂ ತಟ್ಟಿದ ಎಚ್​ಡಿಕೆ ದಾರಿ ತಪ್ಪಿದ ಹೇಳಿಕೆ: ಕಾಂಗ್ರೆಸ್​ ಮಹಿಳಾ ಕಾರ್ಯಕರ್ತೆಯರ ಹೈಡ್ರಾಮಾ

    ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗುರಿಯಾಗಿಸಿಕೊಂಡು ಅಮೀರ್​ ಖಾನ್ ಅವರು ಮಾತನಾಡಿರುವಂತೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಡೀಪ್​ಫೇಕ್ ವಿಡಿಯೋ ಮಾಡಿದ್ದಾರೆ.

    ದೂರದರ್ಶನ ಕಾರ್ಯಕ್ರಮ ‘ಸತ್ಯಮೇವ್ ಜಯತೆ’ ಒಂದು ಸಂಚಿಕೆಯನ್ನು ಒಳಗೊಂಡಂತೆ ವಿವಾದಿತ ಜಾಹೀರಾತಿನಲ್ಲಿ ಅಮೀರ್ ಖಾನ್ ದೃಶ್ಯವನ್ನು ಸೇರಿಸಲಾಗಿದೆ. ಬಿಜೆಪಿಯು ನಾಗರಿಕರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂಪಾಯಿಗಳನ್ನು ಜಮಾ ಮಾಡುವ ಭರವಸೆಯನ್ನು ಅಮೀರ್ ಖಾನ್​ ಟೀಕಿಸಿರುವಂತೆ ಡೀಪ್​ಫೇಕ್ ವಿಡಿಯೋ ಜನರೇಟ್​ ಮಾಡಲಾಗಿದೆ.

    ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್..! ಕಾರಣ ಹೀಗಿದೆ?

    ರಾಜಕೀಯ ಪಕ್ಷವನ್ನು ಬೆಂಬಲಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನೆಲ್ಲೇ ಮುಂಬೈ ಪೊಲೀಸರ ಸೈಬರ್ ಕ್ರೈಮ್ ಸೆಲ್‌ನಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

    ಅಮೀರ್ ಖಾನ್ ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಎಂದಿಗೂ ಬೆಂಬಲಸಿಲ್ಲ. ಹಿಂದಿನ ಹಲವು ಚುನಾವಣೆಗಳಲ್ಲಿ ಚುನಾವಣಾ ಆಯೋಗದ ಸಾರ್ವಜನಿಕ ಜಾಗೃತಿ ಅಭಿಯಾನಗಳ ಮೂಲಕ ಜನರಲ್ಲಿ ಅರಿವು ಮೂಡಿಸಲು ಅಮೀರ್ ಶ್ರಮಿಸಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

    ನಕಲಿ ವಿಡಿಯೋ ಮಾಡಿದ ಮತ್ತು ಶೇರ್ ಮಾಡಿದವರ ಮೇಲೆ ಸೈಬರ್ ಕ್ರೈಂ ಸೆಲ್ ಇದುವರೆಗೂ ಕ್ರಮ ಕೈಗೊಂಡಿಲ್ಲ.

    ಸಂವಿಧಾನ ಬದಲಿಸುವ ಪ್ರಶ್ನೆಯೇ ಇಲ್ಲ: ಶೇ.90ರಷ್ಟು ಸನಾತನಿಗಳಿಂದಲೇ ಸಂವಿಧಾನ ರಚನೆಯಾಗಿದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts