

ನವದೆಹಲಿ: ಬಾಲಿವುಡ್ ನಟ ಅಮೀರ್ ಖಾನ್ ಅವರ ತಾಯಿ ಜೀನತ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೀನತ್ ಹುಸೇನ್ ಅವರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಜೀನತ್ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ವರ್ಷದ ಆರಂಭದಲ್ಲಿ ಅಮೀರ್ ಖಾನ್ ಅವರು ತನ್ನ ತಾಯಿಯ ಹುಟ್ಟುಹಬ್ಬವನ್ನು ಕುಟುಂಬಸ್ಥರೊಂದಿಗೆ ಅದ್ದೂರಿಯಾಗಿ ಆಚರಿಸಿದ್ದರು. ಬರ್ತ್ಡೇ ಪಾರ್ಟಿಗೆ ಅಮೀರ್ರ ಮಾಜಿ ಪತ್ನಿ ಕಿರಣ್ ರಾವ್ ಮತ್ತು ಮಗ ಆಜಾದ್ ಕೂಡ ಪಾಲ್ಗೊಂಡಿದ್ದರು.
ಜೀನತ್ ಹುಸೇನ್ ಅವರು ಬೇಗ ಗುಣಮುಖರಾಗಲೆಂದು ಅಮೀರ್ ಖಾನ್ರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.