More

    ಲೋಕ ಸಮರ: ದೆಹಲಿ, ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ!

    ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿರುವ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿಯ 4 ಕ್ಷೇತ್ರ ಹಾಗೂ ಹರಿಯಾಣದ ಒಂದು ಸೇರಿ ಒಟ್ಟು 5 ಲೋಕಸಭೆ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

    ಇದನ್ನೂ ಓದಿ:ಕಾಂಗ್ರೆಸ್‌ ಹಿರಿಯ ನಾಯಕ ಕಮಲನಾಥ್ ಬಿಜೆಪಿ ಸೇರ್ಪಡೆ ವದಂತಿಗಳಿಗೆ ತೆರೆ: ಅವರು ಹೇಳಿದ್ದಿಷ್ಟು?

    ದೆಹಲಿಯಲ್ಲಿ ಎಎಪಿ 4 ಮತ್ತು ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಉಭಯ ಪಕ್ಷಗಳು ಶನಿವಾರ ಹೇಳಿಕೆ ನೀಡಿದ್ದವು.

    ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರನ್ನು ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿಸಿದೆ. ದೆಹಲಿ ಪೂರ್ವ ಕ್ಷೇತ್ರದಿಂದ ಕುಲದೀಪ್​ ಕುಮಾರ್ ಅವರು ಸ್ಪರ್ಧಿಸಲಿದ್ದಾರೆ. ಕೊಂಡ್ಲಿ ಶಾಸಕ ಕುಲದೀಪ್ ಕುಮಾರ್ ಪೂರ್ವ ದೆಹಲಿಯಿಂದ, ಸಾಹಿರಾಮ್ ಪೆಹೆಲ್ವಾನ್ ದಕ್ಷಿಣ ದೆಹಲಿಯಿಂದ ಮತ್ತು ಮಾಜಿ ಸಂಸದ ಮಹಾಬಲ ಮಿಶ್ರಾ ಅವರನ್ನು ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ರಾಜ್ಯಸಭಾ ಮಾಜಿ ಸಂಸದ ಸುಶೀಲ್ ಗುಪ್ತಾ ಅವರನ್ನು ಹರಿಯಾಣದ ಕುರುಕ್ಷೇತ್ರದಿಂದ ಪಕ್ಷ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

    ಕಾಂಗ್ರೆಸ್‌–ಎಎಪಿ ನಡುವೆ ಸೀಟು ಹಂಚಿಕೆ: ಲೋಕಸಭೆ ಚುನಾವಣೆಗೆ ಎಎಪಿ ಇಂಡಿಯಾ ಮೈತ್ರಿಕೂಟದ ಪಾಲುದಾರರಾಗಿರುವ ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಉಭಯ ಪಕ್ಷದ ನಾಯಕರು ಇತ್ತೀಚೆಗೆ ಸೀಟು ಹಂಚಿಕೆಯನ್ನು ಘೋಷಣೆ ಮಾಡಿದ್ದರು.

    ಪಂಜಾಬ್‌ನಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ: ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಆಪ್ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿವೆ ಎಂದು ಉಭಯ ಪಕ್ಷಗಳು ನಿರ್ಧರಿಸಿವೆ. ಎರಡು ಪಕ್ಷಗಳು ವಿಭಿನ್ನ ಚುನಾವಣಾ ಚಿಹ್ನೆಗಳ ಮೇಲೆ ಹೋರಾಡುತ್ತಿದ್ದರೂ, ದೆಹಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಎಎಪಿ ಹೇಳಿದೆ.

    ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳು ರೂಪಿಸಿರುವ ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಪಕ್ಷಗಳಿವೆ. ಎಎಪಿ ಈಗಾಗಲೇ ಗುಜರಾತ್‌ನ ಭರೂಚ್ ಮತ್ತು ಭಾವನಗರ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
    ದೆಹಲಿಯಲ್ಲಿ ಏಳು ಲೋಕಸಭಾ ಕ್ಷೇತ್ರಗಳಿದ್ದು, 2019ರ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ.

    ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸಿಪಿಐ ಅನ್ನಿ ರಾಜಾ ಕಣಕ್ಕೆ: ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts