More

    ರೈತರು ನೀರಾವರಿ ಸೌಲಭ್ಯದಿಂದ ವಂಚಿತ

    ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರ ಕೃಷಿಗೆ ಪೂರಕವಾದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

    ಕೃಷಿಗೆ ಪೂರಕವಾದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ

    ತಾಲೂಕಿನ ನಂದಿಪುರದಲ್ಲಿ ಮಠಾಧೀಶರ ಧರ್ಮ ಪರಿಷತ್ ಏರ್ಪಡಿಸಿದ್ದ ನೀರಾವರಿ ಚಿಂತನಾ ಸಭೆಯಲ್ಲಿ ಶುಕ್ರವಾರ ಮಾತನಾಡಿದರು.
    ತಾಲೂಕಿನಲ್ಲಿ ಕೃಷಿ ಅವಲಂಬಿತರು ಹೆಚ್ಚಿದ್ದಾರೆ. ಆದರೆ ಕೃಷಿಕರು ನೀರಾವರಿ ಸೌಲಭ್ಯ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಪಕ್ಕದಲ್ಲೇ ತುಂಗಾಭದ್ರಾ ನದಿಯ ನೀರಿದ್ದರೂ, ಸದ್ಬಳಕೆ ಆಗುತ್ತಿಲ್ಲ. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ, ಹೂಳೆತ್ತುವ ಕಾರ್ಯ ಮಾಡಬೇಕು ಎಂದರು.

    ಇದನ್ನೂ ಓದಿ: ಮುಂದಿನ ಮುಖ್ಯಮಂತ್ರಿ ಡಿಕೆಶಿ ಭವಿಷ್ಯ ನುಡಿದ ನೊಣವಿನಕರೆ ಶ್ರೀಗಳು

    ಮಠದ ಡಾ.ಮಹೇಶ್ವರ ಸ್ವಾಮೀಜಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರವು ರೈತರ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದೆ. ಹೋರಾಟದ ಮೂಲಕ ನ್ಯಾಯ ಕೇಳುವ ಪರಿಸ್ಥಿತಿ ರೈತರಿಗೆ ಬಂದೊದಗಿದೆ. ರೈತರಿಗೆ ಸಮರ್ಪಕ ನೀರು ಒದಗಿಸುವಲ್ಲಿ ಜನಪ್ರತಿನಿಧಿಗಳು ಸೋಲುತ್ತಿದ್ದಾರೆ. ರೈತರ ಅನೇಕ ನೀರಾವರಿ ಸಮಸ್ಯೆ ಆಲಿಸಿ ಸರ್ಕಾರದ ಗಮನಕ್ಕೆ ತರುವ ಕಾರ್ಯ ನಿರಂತರವಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.
    ಮಠಾಧೀಶರ ಧರ್ಮ ಪರಿಷತ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರುರನ್ನು ಗೌರವಿಸಿತು. ಮರಿಯಮ್ಮನಹಳ್ಳಿ ಮಲ್ಲಿಕಾರ್ಜುನ ಸ್ವಾಮೀಜಿ, ಬಳ್ಳಾರಿಯ ಕಲ್ಯಾಣ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ಗದ್ದಿಕೇರಿ ಹಿರೇಮಠದ ಚರಂತೇಶ್ವರ ಸ್ವಾಮೀಜಿ ಹಾಗೂ ಪರಿಷತ್ತಿನ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts