ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ: ಸಂಜಯ್ ಸಿಂಗ್

aap
Published on

ಚಂಡೀಗಢ: ಇದೇ ವರ್ಷ ಅಕ್ಟೋಬರ್​ನಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆಯ ಎಲ್ಲ 90 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಗುರುವಾರ ಹೇಳಿದ್ದಾರೆ.

ಈ ಮೂಲಕ ಇಂಡಿಯಾ ಮೈತ್ರಿಕೂಟದ ಎಎಪಿ, ಕಾಂಗ್ರೆಸ್​ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಹಿರಿಯ ನಾಯಕ ಸಂದೀಪ್ ಪಾಠಕ್ ಅವರೊಂದಿಗೆ ಚಂಡೀಗಢದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪ್ರಬಲವಾಗಿ ಹೋರಾಡಲಿದೆ ಎಂದು ಹೇಳಿದರು.

ನಿರುದ್ಯೋಗ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಗ್ನಿಪಥ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹರಿಯಾಣದಲ್ಲಿ ಸುಲಿಗೆಯ ಸರ್ಕಾರವಿದೆ ಎಂದು ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net