More

    ಲೋಕಸಮರ: ಎಎಪಿಯ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು, ಶಾಸಕ ಶೀತಲ್ ಅಂಗುರಲ್ ಬಿಜೆಪಿ ಸೇರ್ಪಡೆ!

    ಪಂಜಾಬ್​: ಎಎಪಿಯ ಪಂಜಾಬ್​ ಏಕೈಕ ಲೋಕಸಭಾ ಸದಸ್ಯ ಸುಶೀಲ್ ಕುಮಾರ್ ರಿಂಕು ಮಾರ್ಚ್ 27 ಬುಧವಾರ ಪಕ್ಷದ ಶಾಸಕ ಶೀತಲ್ ಅಂಗುರಲ್ ಜೊತೆ ಬಿಜೆಪಿಗೆ ಸೇರ್ಪಡೆಗೊಂಡರು.

    ಇದನ್ನೂ ಓದಿ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ್ ಕಾರಜೋಳ!

    ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವಾಗಲೇ ಪಕ್ಷಕ್ಕೆ ಭಾರೀ ಹೊಡೆತ ಬಿದ್ದಿದೆ.

    ಪಂಜಾಬ್‌ನ ಜಲಂಧರ್‌ನ ಸಂಸದ ರಿಂಕು ಮತ್ತು ಜಲಂಧರ್ ಪಶ್ಚಿಮದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಅಂಗುರಲ್ ಅವರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಅದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

    ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಪಂಜಾಬ್‌ನ ಅಭಿವೃದ್ಧಿಗಾಗಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ರಾಜ್ಯದ ಎಎಪಿ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ಕಾರ್ಯಗಳಿಗೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದ ಒಳಿತಿಗಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಶೈಲಿಯಿಂದ ನಾನು ಪ್ರಭಾವಿತನಾಗಿದ್ದೇನೆ ಎಂದು ರಿಂಕು ಬುಧವಾರ ಹೇಳಿದ್ದಾರೆ.

    ಸಂಸದ ರಿಂಕು ಅವರು ಕಳೆದ ವರ್ಷ ಕಾಂಗ್ರೆಸ್​ ತೊರೆದು ಎಎಪಿ ಸೇರಿದ್ದರು. ಬಳಿಕ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಸಂಸತ್ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಿ ಅಶಿಸ್ತು ತೋರಿದ್ದ ಆರೋಪದಲ್ಲಿ ಅಮಾನತುಗೊಂಡಿದ್ದವರ ಪೈಕಿ ರಿಂಕು ಕೂಡ ಒಬ್ಬರು. ಬಿಜೆಪಿಯು ಪಂಜಾಬ್‌ನಿಂದ ರಿಂಕು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ.

    ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ ಐವರು ಶಾಸಕರಿಂದ ರಾಜೀನಾಮೆ: ನೋ ಕಮೆಂಟ್​ ಎಂದ ಕೆಎಚ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts