More

    ದೈವ ಹಾಗೂ ದುಷ್ಟ ಶಕ್ತಿ ನಡುವಿನ ಸಂಘರ್ಷದ ಕಥೆಯೇ ‘ಆರ’

    ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ದೈವ ಹಾಗೂ ದುಷ್ಟ ಶಕ್ತಿ ನಡುವಿನ ಸಂಘರ್ಷದ ಕುರಿತಾಗಿ ಹಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಆರ’ ಎಂಬ ಹೊಸ ಚಿತ್ರವೂ ಸೇರಿದೆ. ಅಶ್ವಿನ್ ವಿಜಯ ಮೂರ್ತಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಆರ’ ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

    ಇದನ್ನೂ ಓದಿ: ‘ಲಂಕಾಸುರ’ನ ಜತೆಗೆ ‘ಮಾಡರ್ನ್ ಮಹಾಲಕ್ಷ್ಮೀ’ … ಹಾಡು ಬಿಡುಗಡೆ ಮಾಡಿದ ಕನಸಿನ ರಾಣಿ

    ಸಾಮಾನ್ಯವಾಗಿ ಇಂಥ ಚಿತ್ರಗಳನ್ನು ಹಾರರ್​ ಜಾನರ್​ಗೆ ಸೇರಿಸಲಾಗುತ್ತಿತ್ತು. ಆದರೆ, ಇದೊಂದು ಸ್ಪಿರಿಚ್ಯುಯಲ್​ ಡ್ರಾಮಾ ಎಂದು ಬಣ್ಣಿಸಲಾಗಿದೆ. ‘ಆರ’ ಎಂಬ ಹುಡುಗನ ಸುತ್ತ ಈ ಚಿತ್ರ ಸುತ್ತಲಿದ್ದು, ಹೆಣ್ಣು, ಹೊನ್ನು, ಮಣ್ಣು ರೂಪದಲ್ಲಿ ನೀಡುವ ಸವಾಲುಗಳನ್ನು ಎದುರಿಸಿ ಆತ ತನ್ನ ತಾತನಿಂದ ಬಳುವಳಿಯಾಗಿ ಬಂದ ಕಾಡನ್ನು ಉಳಿಸಿಕೊಳ್ಳುವಲ್ಲಿ ಜಯಶಾಲಿಯಾಗುತ್ತಾನಾ? ಈ ಜರ್ನಿಯಲ್ಲಿ ಆತ ಕಂಡು ಕೊಂಡ ಉತ್ತರವೇನು ಎನ್ನುವುದು ಈ ಚಿತ್ರದ ಕಥೆಯಂತೆ.

    ಕಳೆದ ಎಂಟು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅಶ್ವಿನ್, ದಿನೇಶ್ ಬಾಬು ನಿರ್ದೇಶನದ ‘ನನಗಿಷ್ಟ’ ಸಿನಿಮಾದಲ್ಲಿ ನಟಿಸಿದ್ದಾರೆ. ‘ಕಿನ್ನರಿ’, ‘ಸೇವಂತಿ ಸೇವಂತಿ’ ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದಾರೆ. ಇದೇ ಮೊದಲ ಬಾರಿಗೆ ಅವರು ನಿರ್ದೇಶನ ಮಾಡಿದ್ದು, ಈಗಾಗಲೇ ಚಿತ್ರೀಕರಣ ಮುಗಿದು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಸಹ ಪ್ರಾರಂಔವಾಗಿದೆ.

    ಇದನ್ನೂ ಓದಿ: ಆರು ಭಾಷೆಗಳ ನಂತರ ಈಗ ಏಳನೆಯ ಭಾಷೆಯಲ್ಲಿ ‘ಕಾಂತಾರ’ ಬಿಡುಗಡೆ …

    ‘ಆರ’ ಚಿತ್ರದಲ್ಲಿ ರೋಹಿತ್ ಹಾಗೂ ದೀಪಿಕಾ ಆರಾಧ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ರೋಹಿತ್​ ಅವರೇ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ರಚಿಸಿದ್ದಾರೆ. ಶ್ರೀಹರಿ ಛಾಯಾಗ್ರಾಹಣ, ಗಿರೀಶ್ ಹೊತ್ತೂರ್ ಸಂಗೀತ ಈ ಚಿತ್ರಕ್ಕಿದೆ.

    ಐದು ನಗರಗಳಲ್ಲಿ ಮನೆ ಖರೀದಿಸಿದ್ದಾರಾ ರಶ್ಮಿಕಾ ಮಂದಣ್ಣ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts