More

    ಉತ್ತರಾಧಿ ಮಠದಲ್ಲಿ ಫೆ.8ರಿಂದ ಪುರಂದರದಾಸರ ಆರಾಧನ ಮಹೋತ್ಸವ

    ಬೆಂಗಳೂರು : ಬಸವನಗುಡಿಯ ಶ್ರೀ ಉತ್ತರಾದಿ ಮಠದಲ್ಲಿ ಫೆ.8ರಿಂದ ಮೂರು ದಿನಗಳ ಕಾಲ ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಶ್ರೀ ಶ್ರೀನಿವಾಸ ಉತ್ಸವ ಬಳಗ ಮತ್ತು ದಾಸ ಸಾಹಿತ್ಯ ಪ್ರಚಾರ ಮಾಧ್ಯಮದ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಫೆ.8ರಂದು ಬೆಳಗ್ಗೆ ಶ್ರೀಪುರಂದರ ದಾಸರ ಬೃಹತ್ ಶಿಲಾವಿಗ್ರಹಕ್ಕೆ ಅಭಿಷೇಕ, ದಾಸರ ಕರತಿಗಳ ಗೋಷ್ಠಿಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಸಂಜೆ 5.45ಕ್ಕೆ ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದಂಗಳು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ವಿದ್ವಾಂಸರಾದ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರಿಗೆ ‘ಶ್ರೀಮಧ್ವ ಪುರಂದರ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ವಿವಿಧ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಫೆ.9 ರಂದು ಬೆಳಗ್ಗೆ 9.15 ರಿಂದ ಪುರಂದರದಾಸರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ನಂತರ ಪುರಂದರದಾಸರ ಉತ್ಸವ ಮೂರ್ತಿ ಮೆರವಣಿಗೆ ಹಾಗೂ ವಿವಿಧ ತಂಡಗಳಿಂದ ಭಜನೆ ನಡೆಯಲಿದೆ. ಅಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಿಂದೂಸ್ಥಾನಿ ಗಾಯಕ ಡಾ. ಪಂ.ನಾಗರಾಜರಾವ್ ಹವಾಲ್ದಾರ್ ಅವರಿಗೆ ‘ಪುರಂದರ ಸಂಗೀತ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    ಫೆ.10ರಂದು ಸಂಜೆ ವಿವಿಧ ಭಜನಾ ತಂಡಗಳಿಂದ ಭಜನೆ, ಸಂಗೀತ, ಭರತನಾಟ್ಯ ಹಾಗೂ ಪ್ರವಚನ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕ್ಷೇತ್ರದ ಸಾಧಕರಿಗೆ ಹರಿದಾಸ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts