

ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಆರಾಧ್ಯಾ ಆರ್. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಸನ್ನ ಕೆ., ಮಹಾಲಕ್ಷ್ಮಿ ಮತ್ತು ಸುನೀತ ತರಬೇತಿ ನೀಡಿದ್ದರು. ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಶಿಕ್ಷಕಿ ಯಶೋದಾ ದಂಪತಿ ಪುತ್ರಿ.