ಹುಬ್ಬಳ್ಳಿ: ಇಲ್ಲಿಯ ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ (ಕೆಸಿಟಿಆರ್ಐ) ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಮಹಾಲಿಂಗಶೆಟ್ಟಿ ಕುಟುಂಬದ ಸಹಯೋಗದಲ್ಲಿ ಆರೋಗ್ಯ ವಾಹಿನಿ ಲೋಕಾರ್ಪಣೆ ಸಮಾರಂಭ ಸೆ. 26ರಂದು ಬೆಳಗ್ಗೆ 10ಕ್ಕೆ ಏರ್ಪಡಿಸಲಾಗಿದೆ.
ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶಾಸಕ ಅರವಿಂದ ಬೆಲ್ಲದ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕೆಸಿಟಿಆರ್ ಐ ಅಧ್ಯಕ್ಷ ಡಾ. ವಿಜಯ ಸಂಕೇಶ್ವರ, ಚೇರ್ಮನ್ ಡಾ. ಬಿ.ಆರ್. ಪಾಟೀಲ, ಗೌರವ ಕಾರ್ಯದರ್ಶಿ ಡಾ. ಸುಭಾಸ ಬೆಂಬಳಗಿ, ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.