ಡಿವೋರ್ಸ್​ ಘೋಷಣೆ ಮಾಡಿದ ಬೆನ್ನಲ್ಲೇ ಜಯಂ ರವಿ ವಿರುದ್ಧ ಆಕ್ರೋಶ ಹೊರಹಾಕಿದ ಪತ್ನಿ ಆರತಿ!

Jayam Ravi

ಚೆನ್ನೈ: ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನದ ಸುದ್ದಿಯನ್ನೇ ಅಭಿಮಾನಿಗಳು ಇನ್ನೂ ಅರಗಿಸಿಕೊಳ್ಳಲು ಆಗಿಲ್ಲ. ಅಲ್ಲದೆ, ಧನುಷ್-ಐಶ್ವರ್ಯ ರಜನಿಕಾಂತ್​ ಡಿವೋರ್ಸ್​ ಸುದ್ದಿಯು ಸಹ ಅಭಿಮಾನಿಗಳಿಗೆ ಬರಸಿಡಿಲನಂತೆ ಅಪ್ಪಳಿಸಿತು. ಇದರ ಬೆನ್ನಲ್ಲೇ ಖ್ಯಾತ ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ತಮ್ಮ ಪತ್ನಿಯಿಂದ ಬೇರ್ಪಡುತ್ತಿರುವುದಾಗಿ ಘೋಷಿಸಿದರು. ಸ್ಯಾಂಡಲ್​ವುಡ್​ನಲ್ಲಿ ಬಿಗ್​ಬಾಸ್​ ಜೋಡಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ. ಡಾ. ರಾಜ್​ ಕುಟುಂಬದ ಯುವರಾಜ್​ಕುಮಾರ್​ ಮತ್ತು ಶ್ರೀದೇವಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸುದ್ದಿಗಳು ಇನ್ನು ಜೀವಂತವಾಗಿರುವಾಗಲೇ ಮತ್ತೊಂದು ತಾರಾ ಜೋಡಿ ಕೂಡ ವಿಚ್ಛೇದನ ಪಡೆದಿದೆ.

ಕಾಲಿವುಡ್ ಸ್ಟಾರ್ ಜಯಂ ರವಿ ಅವರು ತಮ್ಮ ಪತ್ನಿ ಆರತಿಗೆ ವಿಚ್ಛೇದನ ನೀಡಿರುವುದಾಗಿ ಘೋಷಿಸಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಇತ್ತೀಚೆಗಷ್ಟೇ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಬೇರ್ಪಟ್ಟಿದ್ದಾರೆ. ಎರಡು ದಿನಗಳ ಹಿಂದಷ್ಟೇ ಜಯಂ ರವಿ ಅವರು ತಮ್ಮ ಇನ್​ಸ್ಟಾಗ್ರಾಂನಲ್ಲಿ ಪತ್ರವೊಂದನ್ನು ಹಂಚಿಕೊಳ್ಳುವ ಮೂಲಕ ಡಿವೋರ್ಸ್​ ಖಚಿತಪಡಿಸಿದರು. ಈ ಹಿನ್ನೆಲೆಯಲ್ಲಿ ಇಂದು ಜಯಂ ರವಿ ಪತ್ನಿ ‘ಆರತಿ ರವಿ’ ಕೂಡ ಪತ್ರವೊಂದನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಪತ್ರದಲ್ಲಿ ಆರತಿ ಅವರು ಬರೆದಿರುವ ಅಂಶಗಳು ಕಾಲಿವುಡ್​ ಅಂಗಳದಲ್ಲಿ ಭಾರಿ ಸಂಚಲನ ಮೂಡಿಸಿದೆ.

ನನ್ನ ಗಮನಕ್ಕೆ ತರದೆ ಅಥವಾ ಒಪ್ಪಿಗೆಯಿಲ್ಲದೆ ನಮ್ಮ ವೈವಾಹಿಕ ಜೀವನದ ಬಗ್ಗೆ ಇತ್ತೀಚಿಗೆ ಹೊರಡಿಸಿದ ಸಾರ್ವಜನಿಕ ಪ್ರಕಟಣೆಯಿಂದ ನಾನು ಆಘಾತಕ್ಕೆ ತೀವ್ರ ಒಳಗಾಗಿದ್ದೇನೆ ಮತ್ತು ದುಃಖಿತಳಾಗಿದ್ದೇನೆ. 18 ವರ್ಷಗಳ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ತುಂಬಾ ಗೌರವಯುತವಾಗಿ ಮತ್ತು ಗೌಪ್ಯತೆಯಿಂದ ನಿರ್ವಹಿಸಬೇಕೆಂದು ನಾನು ನಂಬುತ್ತೇನೆ.

ನಾನು ನನ್ನ ಪತಿಯೊಂದಿಗೆ ನೇರವಾಗಿ ಮಾತನಾಡಲು ಹಲವು ಬಾರಿ ಪ್ರಯತ್ನಿಸಿದೆ. ದುರದೃಷ್ಟವಶಾತ್, ನನಗೆ ಆ ಅವಕಾಶ ಸಿಗಲಿಲ್ಲ. ಇದೀಗ ಈ ಡಿಢೀರ್​ ಡಿವೋರ್ಸ್​ ಪ್ರಕಟಣೆಯಿಂದ ನನ್ನ ಮಕ್ಕಳು ಮತ್ತು ನಾನು ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ಮದುವೆಯನ್ನು ವಿಸರ್ಜಿಸುವ ಮತ್ತು ಪ್ರತ್ಯೇಕಗೊಳ್ಳುವ ನಿರ್ಧಾರವು ಸಂಪೂರ್ಣವಾಗಿ ಏಕಪಕ್ಷೀಯವಾಗಿದೆ. ಇದರಿಂದ ನಮ್ಮ ಕುಟುಂಬಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯು ನಮಗೆ ಅತೀವ ದುಃಖವನ್ನುಂಟುಮಾಡಿದ್ದರೂ, ನಾನು ಗೌರವದಿಂದ ವರ್ತಿಸಬೇಕುಕೆಂದು ಭಾವಿಸುತ್ತೇನೆ. ಈ ಕಾರಣಕ್ಕೆ ನಾನು ಈವರೆಗೂ ಈ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿಲ್ಲ.

ಇನ್ನು ಈ ಪ್ರಕರಣದಲ್ಲಿ ನನ್ನನ್ನು ದೂಷಿಸುವ ಮತ್ತು ನನ್ನ ಪಾತ್ರವನ್ನು ತಪ್ಪಾಗಿ ನಿರೂಪಿಸುವ ಸುದ್ದಿಯಿಂದ ನಾನು ತೀವ್ರವಾಗಿ ನೋಂದಿದ್ದೇನೆ. ತಾಯಿಯಾಗಿ ನನ್ನ ಮೊದಲ ಆದ್ಯತೆ ಯಾವಾಗಲೂ ನನ್ನ ಮಕ್ಕಳ ಯೋಗಕ್ಷೇಮವಾಗಿದೆ. ಈ ಘಟನೆ ನನ್ನ ಮಕ್ಕಳ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಹೆದರುತ್ತೇನೆ. ನಮ್ಮ ಮಕ್ಕಳ ಯೋಗಕ್ಷೇಮದ ಮೇಲೆ ನನ್ನ ಗಮನವಿದೆ ಮತ್ತು ಈ ಕಷ್ಟದ ಸಮಯದಲ್ಲಿ ನಾನು ಅವರನ್ನು ರಕ್ಷಿಸುತ್ತೇನೆ. ನಾನು ಪತ್ರಿಕೆಗಳು, ಮಾಧ್ಯಮಗಳು ಮತ್ತು ನಮ್ಮ ಆತ್ಮೀಯ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ, ಏಕೆಂದರೆ, ಸಮಯಕ್ಕೆ ಸತ್ಯವು ಹೊರಬರುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ದಯೆ ಮತ್ತು ಪ್ರೀತಿ ನಮ್ಮ ಶಕ್ತಿ. ನಮ್ಮ ಜೀವನದ ಈ ಅಧ್ಯಾಯದಲ್ಲಿ ನಿಮ್ಮ ಗೌಪ್ಯತೆಯನ್ನು ಕೋರುತ್ತೇನೆ ಎಂದಿದ್ದಾರೆ.

ಜಯಂ ರವಿ ಪತ್ರದಲ್ಲೇನಿತ್ತು?
ಹೆಚ್ಚು ಯೋಚಿಸಿದ ನಂತರ ಆರತಿಯೊಂದಿಗೆ ನನ್ನ ವೈವಾಹಿಕ ಜೀವನದಿಂದ ದೂರವಿರಲು ನಾನು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ಆತುರವಾಗಿ ತೆಗೆದುಕೊಂಡಿಲ್ಲ, ಕೆಲವು ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ. ಈ ಸಮಯದಲ್ಲಿ ನನ್ನ ಖಾಸಗಿತನ ಮತ್ತು ನನಗೆ ಹತ್ತಿರವಿರುವವರ ಗೌಪ್ಯತೆಯನ್ನು ಗೌರವಿಸಲು ನಾನು ಎಲ್ಲರಿಗೂ ವಿನಂತಿಸುತ್ತೇನೆ. ಈ ನಿರ್ಧಾರವು ನನ್ನ ಸ್ವಂತ ನಿರ್ಧಾರವಾಗಿದೆ ಮತ್ತು ಈ ವಿಷಯವು ನನ್ನ ವೈಯಕ್ತಿಕ ವಿಷಯವಾಗಿ ಉಳಿಯಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನನ್ನ ಅಭಿನಯದ ಮೂಲಕ ನನ್ನ ಅಭಿಮಾನಿಗಳು ಮತ್ತು ಜನರಲ್ಲಿ ಸಂತೋಷ ಮತ್ತು ತೃಪ್ತಿಯನ್ನು ತರುವುದು ನನ್ನ ಆದ್ಯತೆಯಾಗಿದೆ. ನಾನು ಎಂದೆಂದಿಗೂ ನಿಮ್ಮ ಜಯಂ ರವಿಯಾಗಿರಲು ಬಯಸುತ್ತೇನೆ. ನೀವು ನನಗೆ ನೀಡುತ್ತಿರುವ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು ಎಂದು ಜಯಂ ರವಿ ಹೇಳಿದ್ದಾರೆ.

ಅಂದಹಾಗೆ ಜಯಂ ರವಿ ಅವರು 2009ರಲ್ಲಿ ಆರತಿಯನ್ನು ವಿವಾಹವಾದರು. ಆರತಿ, ತಮಿಳಿನ ಖ್ಯಾತ ನಿರ್ಮಾಪಕಿ ಸುಜಾತಾ ವಿಜಯ್ ಕುಮಾರ್ ಅವರ ಮಗಳು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈ ಪೈಕಿ ಆರವ್ ಇತ್ತೀಚೆಗೆ ಟಿಕ್ ಟಿಕ್ ಟಿಕ್ ಚಿತ್ರದಲ್ಲಿ ನಟಿಸಿದ್ದರು. ರವಿ ಮತ್ತು ಆರತಿ ಜೋಡಿ ಕಾಲಿವುಡ್ ಇಂಡಸ್ಟ್ರಿಯಲ್ಲಿ ಮುದ್ದಾದ ಜೋಡಿ ಎಂದೇ ಹೆಸರುವಾಸಿಯಾಗಿತ್ತು. ಆದರೆ ಕೆಲವು ವರ್ಷಗಳಿಂದ ಭಿನ್ನಾಭಿಪ್ರಾಯಗಳಿದ್ದು, ಕೆಲ ದಿನಗಳಿಂದ ಇಬ್ಬರೂ ದೂರ ಉಳಿದಿದ್ದರು. ಇದೀಗ ಡಿವೋರ್ಸ್​ ಆಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. (ಏಜೆನ್ಸೀಸ್​)

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ನನ್ನ ದಾಖಲೆ ಸೇಫ್​… ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್!

Share This Article

ಉಪ್ಪಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಹುಡುಕಿದ ಪಾಕವಿಧಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಉಪ್ಪಿನಕಾಯಿ ಭಾರತದಲ್ಲಿ…

ಟಾಯ್ಲೆಟ್​​ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Tips

ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…

ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips

ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…