

ಬಂಟ್ವಾಳ: ತುಳುನಾಡಿನಲ್ಲಿ ಕೃಷಿಕರ ಆಟಿ ತಿಂಗಳ ಕಷ್ಟಕರ ಬದುಕಿನ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ಪ್ರಯತ್ನವಾಗಿ ಆಟಿದ ಕೂಟ ಕಾರ್ಯಕ್ರಮ ಎಲ್ಲೆಡೆ ಶಾಲಾ ಮಟ್ಟದಲ್ಲಿ ನಡೆಯುತ್ತಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಹೇಳಿದರು.
ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಟಿದ ಕೂಟ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಚಂದ್ರಾವತಿ ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಲೊರೆಟ್ಟೊ ಅಗ್ರಾರ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಫಿಲೋಮಿನಾ ರಾಡ್ರಿಗಸ್, ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ, ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫರ್ನಾಂಡಿಸ್, ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯಾಧ್ಯಕ್ಷ ಕೆ.ಪರಮೇಶ್ವರ ಪೂಜಾರಿ ರಾಯಿ, ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಲೋಕೇಶ್ ಕೈತ್ರೋಡಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪದ್ಮನಾಭ ಗೌಡ, ಮಾಜಿ ಅಧ್ಯಕ್ಷ ರಮೇಶ ಗೌಡ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಮಿತ್ ಶಿವನಗರ, ನಮ್ಮ ಜವನೆರ್ ಟ್ರಸ್ಟ್ ಅಧ್ಯಕ್ಷ ಪ್ರದೀಪ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು. ಮುಖ್ಯಶಿಕ್ಷಕಿ ಜಾನೆಟ್ ಕಾನ್ಸೆಸೊ ಸ್ವಾಗತಿಸಿದರು. ಶಿಕ್ಷಕ ಸಿದ್ಧಪ್ಪ ಕಡೂರು ವಂದಿಸಿದರು. ಶಿಕ್ಷಕಿಯರಾದ ಬೇಬಿ ಅರಳ, ತನುಜಾ, ನಿಖಿತಾ ಕಾರ್ಯಕ್ರಮ ನಿರೂಪಿಸಿದರು.