ಆಟಿ ಉತ್ಸವದಿಂದ ಆಚರಣೆಗಳ ಅನಾವರಣ : ಹರೀಶ್ ಇಂಜಾಡಿ ವಿಶ್ಲೇಷಣೆ

New Project (13)
Published on

ವಿಜಯವಾಣಿ ಸುದ್ದಿಜಾಲ ಸುಳ್ಯ

ಬದುಕಿನಲ್ಲಿ ಹಾಸುಹೊಕ್ಕಾಗಿರುವ ಆಚರಣೆಗಳ ಅನಾವರಣ ಆಟಿ ಉತ್ಸವದಿಂದ ಸಾಧ್ಯ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಆಶ್ರಯದಲ್ಲಿ ಸುಳ್ಯ ಜಾಲ್ಸೂರಿನ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಅರೆಭಾಷೆ ಜಂಬರ ಆಟಿಕೂಟದ ಸಮಾರೋಪದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕೊಡಿಯಾಲಬೈಲು ಎಂಜಿಎಂ ವಿದ್ಯಾಸಂಸ್ಥೆಗಳ ಸಂಚಾಲಕ ದೊಡ್ಡಣ್ಣ ಬರೆಮೇಲು ಉಪನ್ಯಾಸ ನೀಡಿದರು. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಅಧ್ಯಕ್ಷ ಪಿ.ಎಸ್. ಗಂಗಾಧರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು. ಪಾರ್ವತಿ ಕೆ.ಎನ್.ಕಡಪಳ, ಕೇಪು ಸುಂದರ, ಸೋನಾ ಅಡ್ಕಾರ್ ಅವರನ್ನು ಸನ್ಮಾನಿಸಲಾಯಿತು. ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ನಿವೃತ್ತ ಯೋಧ ಅಡ್ಡಂತ್ತಡ್ಕ ದೇರಣ್ಣ ಗೌಡ, ಅಕಾಡೆಮಿ ಮಾಜಿ ಸದಸ್ಯೆ ತಿರುಮಲೇಶ್ವರಿ ಅರ್ಭಡ್ಕ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಅಕಾಡೆಮಿ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ ಮೊದಲಾದವರಿದ್ದರು. ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಸ್ವಾಗತಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ನಿರೂಪಿಸಿದರು.

ಉದ್ಘಾಟನಾ ಸಮಾರಂಭ

ಪ್ರಗತಿಪರ ಕೃಷಿಕ ಎ.ಆರ್.ಗಂಗಾಧರ ಗೌಡ ಅಡ್ಕಾರು ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಜಾಲ್ಸೂರು ಗ್ರಾಪಂ ಅಧ್ಯಕ್ಷೆ ಸಾವಿತ್ರಿ ಅಡ್ಕಾರು, ದೇವಸ್ಥಾನ ಮೊಕ್ತೇಸರ ಗುರುರಾಜ್ ಭಟ್, ಕಾರ್ಯಕ್ರಮ ಸಂಚಾಲಕ ಡಾ. ಜ್ಞಾನೇಶ್ ಎನ್.ಎ., ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಜಯ ಕುಮಾರ್ ನರಿಯೂರು, ಪುರುಷೋತ್ತಮ ನಂಗಾರು, ಹೇಮಚಂದ್ರ ಕುತ್ಯಾಳ, ವಿನೋದ್ ಮಹಾಬಲಡ್ಕ, ಸುಮತಿ ಹುಲಿಮನೆ, ಸೌಮ್ಯಾ ಬೈತಡ್ಕ, ಭಾರತಿ ಕೋನಡ್ಕ ಉಪಸ್ಥಿತರಿದ್ದರು. ಹರಿಪ್ರಕಾಶ್ ಅಡ್ಕಾರು ಸ್ವಾಗತಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ನಿರೂಪಿಸಿದರು. ಲೋಕನಾಥ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net