ಆಟಿ ಶುದ್ಧತೆ, ಶಾಂತಿ, ತಾಳ್ಮೆಯ ಸಮಯ : ಬಿ ಸಿ ರೋಡ್‌ನಲ್ಲಿ ಭುವನೇಶ್ ಪಚ್ಚಿನಡ್ಕ ಅಭಿಪ್ರಾಯ

New Project (14)
Published on

ಬಂಟ್ವಾಳ: ಆಟಿ ತಿಂಗಳು ಶುದ್ಧತೆ, ಶಾಂತಿ ಹಾಗೂ ತಾಳ್ಮೆಯ ಸಮಯವಾಗಿದ್ದು, ಆಚರಣೆಗಳು ಶರೀರ ಶುದ್ಧೀಕರಣ, ಮನಸ್ಸು ಸ್ಥಿರಗೊಳಿಸುವಿಕೆ ಹಾಗೂ ಪರಿಸರ ಸಂರಕ್ಷಣೆಯತ್ತ ಗಮನ ಸೆಳೆಯುತ್ತವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.

ಯುವವಾಹಿನಿ ಬಂಟ್ವಾಳ ಘಟಕದಿಂದ ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘ ಅಧ್ಯಕ್ಷೆ ಉಷಾ ಕಾಂಚನ್ ಚೆನ್ನೆಮಣೆ ಸ್ಪರ್ಧೆ ಉದ್ಘಾಟಿಸಿದರು. ಉದ್ಯಮಿ ಲೋಕೇಶ್ ಪೂಜಾರಿ ಕಲ್ಲಡ್ಕ ನಲಿಪುಲೆಗಾ ತುಳು ಹಾಡು ನೃತ್ಯ ಸ್ಪರ್ಧೆ ಉದ್ಘಾಟಿಸಿದರು. ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಆಟಿದ ಮದಿಪು ನೀಡಿದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ನಿಕಟಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಬಂಟ್ವಾಳ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಉಪಸ್ಥಿತರಿದ್ದರು.

ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕರಾದ ನಿರೀಕ್ಷಾ, ತನುಶ್ರೀ, ಸಾನಿಕಾ ಜೆ. ಪೂಜಾರಿ ಕಿಶನ್ ರಾಜ್, ಸಮೀಕ್ಷಾ, ಶ್ರೀನಿಧಿ ಹಾಗೂ ಅಂಕಿತ್ ಎಚ್.ಕೋಟ್ಯಾನ್ ಅವರಿಗೆ ಅಕ್ಷರ ಪುರಸ್ಕಾರ ಪ್ರದಾನ ಮಾಡಲಾಯಿತು.

ಕಾರ್ಯಕ್ರಮ ಸಂಚಾಲಕಿ ಶೈಲಜಾ ಹರೀಶ್ ಸ್ವಾಗತಿಸಿದರು. ಯುವವಾಹಿನಿ ಮಾಜಿ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಪ್ರಸ್ತಾವನೆ ಮಾಡಿದರು. ಕಾರ್ಯದರ್ಶಿ ಮಧುಸೂದನ್ ಮದ್ವ ಹಾಗೂ ಜತೆ ಕಾರ್ಯದರ್ಶಿ ಲೋಹಿತ್ ಕನಪಾದೆ ವಂದಿಸಿದರು. ಸಂಚಾಲಕರಾದ ನವೀನ್ ಕಾರಾಜೆ, ವಿಕ್ರಮ್ ಶಾಂತಿ, ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ನವೀನ್ ಪೂಜಾರಿ, ವಿದ್ಯಾನಿಧಿ ನಿರ್ದೇಶಕ ಮಹೇಶ್ ಬೊಳ್ಳಾಯಿ ಉಪಸ್ಥಿತರಿದ್ದರು, ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

ಗೌರವ ಪುರಸ್ಕಾರ ಪ್ರದಾನ, ಅಭಿನಂದನೆ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಕಂಬಳ ಕ್ಷೇತ್ರ ಸಾಧಕ ತ್ರಿಶಾಲ್ ಕೆ.ಪೂಜಾರಿ, ದೈವಾರಾಧಕ ಸತೀಶ್ ಕಾಂಜಿರ್ ಕೋಡಿ, ನಾಟಿ ವೈದ್ಯ ಕೆ.ಈಶ್ವರ ಪೂಜಾರಿ ಅವರಿಗೆ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಶ್ರೀ ಕ್ಷೇತ್ರ ಗೆಜ್ಜೆಗಿರಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಸಜೀಪ ಮೂಡ ಈಶ್ವರ ಮಂಗಳ ಸದಾಶಿವ ದೇವಸ್ಥಾನ ಅಧ್ಯಕ್ಷ ಗಿರೀಶ್ ಪೂಜಾರಿ ಪೆರ್ವ, ಅಜ್ಜಿಬೆಟ್ಟು ವಾಮದಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಧ್ಯಕ್ಷ ಕೌಡೊಡಿ ವಿವೇಕಾನಂದ ಪೂಜಾರಿ, ರಾಯಿ ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷ ರಾಘವೇಂದ್ರ ರಾಯಿ ಅವರನ್ನು ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net