

ಕಡಬ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು, ಹಳೆನೇರೆಂಕಿ ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ಸಮಿತಿ ಆಶ್ರಯದಲ್ಲಿ ಆಟಿ ಸಂಭ್ರಮ ಹಳೆನೇರೆಂಕಿಯ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಾಖಾ ಕಟ್ಟಡ ವಠಾರದಲ್ಲಿ ನಡೆಯಿತು.
ಪುತ್ತೂರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕೆಡೆಂಜಿ ಕಾರ್ಯಕ್ರಮ ಉದ್ಘಾಟಿಸಿದರು. ನೆಲ್ಯಾಡಿ ಸಂತ ಜಾರ್ಜ್ ಪ.ಪೂ.ಕಾಲೇಜಿನ ಉಪನ್ಯಾಸಕ ಚೇತನ್ ಆನೆಗುಂಡಿ ಆಟಿ ತಿಂಗಳ ಆಹಾರ ಪದ್ಧತಿಗಳು, ಔಷಧ ತಯಾರಿ, ಸೇವನೆ ಉದ್ದೇಶಗಳ ಬಗ್ಗೆ ವಿವರಿಸಿದರು.
ಹಳೆನೇರೆಂಕಿ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಬರೆಂಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮುತ್ತಪ್ಪ ಪೂಜಾರಿ ನೈಯ್ಯಲ್ಗ, ಹಿರಿಯರಾದ ವಿಶ್ವನಾಥ ರೈ ಎರಟಾಡಿ, ಹಳೆನೇರೆಂಕಿ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶೇಖರ ಗೌಡ ಹಿರಿಂಜ ಉಪಸ್ಥಿತರಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಅಜಿತ್‌ಕುಮಾರ್ ಪಾಲೇರಿ ಅವರನ್ನು ಗೌರವಿಸಲಾಯಿತು. ಹಳೆನೇರೆಂಕಿ ಬಿಲ್ಲವ ಮಹಿಳಾ ಗ್ರಾಮ ಸಮಿತಿ ಅಧ್ಯಕ್ಷೆ ಸುಚೇತ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ನಾರಾಯಣ ಪೂಜಾರಿ ಕದ್ರ ವಂದಿಸಿದರು. ಶಿಕ್ಷಕರಾದ ದಿನೇಶ್ ಬರೆಂಬೆಟ್ಟು, ಪ್ರೇಮನಾಥ್ ನಿರೂಪಿಸಿದರು.