ಆಟಿದ ಕೂಟ ಯುವಜನತೆಗೆ ಪ್ರೇರಣಾದಾಯಕ: ಗಣೇಶ ಶೆಟ್ಟಿ ಆರಂಬೋಡಿ ಹೇಳಿಕೆ

aati
ಆಟಿದ ಕೂಟ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿನಿ ಸಾನಿಧ್ಯಾ ಅವರನ್ನು ಸನ್ಮಾನಿಸಲಾಯಿತು. ಕ್ಲಬ್‌ನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಮಾಜಿ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್, ಕೋಶಾಧಿಕಾರಿ ಹೆರಾಲ್ಡ್ ಮೊಂತೆರೋ ಮತ್ತಿತರರು ಇದ್ದರು.
Published on

ಬಂಟ್ವಾಳ: ತುಳುನಾಡಿನ ಕೃಷಿ ಪರಂಪರೆ ಮತ್ತು ಜೀವನ ಪದ್ಧತಿ ಬಿಂಬಿಸುವಲ್ಲಿ ಆಟಿದ ಕೂಟ ಕಾರ್ಯಕ್ರಮ ಯುವಜನತೆಗೆ ಪ್ರೇರಣಾದಾಯಕವಾಗಿದೆ ಎಂದು ರೋಟರಿ ವಲಯ ಸೇನಾನಿ ಗಣೇಶ ಶೆಟ್ಟಿ ಆರಂಬೋಡಿ ಹೇಳಿದರು.

ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಬುಧವಾರ ಆಟಿದ ಕೂಟ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕ್ಲಬ್‌ನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಸಾಧಕ ವಿದ್ಯಾರ್ಥಿನಿ ಸಾನಿಧ್ಯಾ ಅವರನ್ನು ಸನ್ಮಾನಿಸಲಾಯಿತು. ಮಾಜಿ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್, ಕೋಶಾಧಿಕಾರಿ ಹೆರಾಲ್ಡ್ ಮೊಂತೆರೋ, ಪ್ರಮುಖರಾದ ಎಂ.ಪದ್ಮರಾಜ ಬಲ್ಲಾಳ್, ರಾಘವೇಂದ್ರ ಭಟ್, ಕೆ.ರಮೇಶ ನಾಯಕ್ ರಾಯಿ, ಆಂಟನಿ ಸಿಕ್ವೇರ ಇದ್ದರು.

ಕ್ಲಬ್‌ನ ಅಧ್ಯಕ್ಷ ಸುರೇಶ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ ಶೆಟ್ಟಿ ಸೀತಾಳ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net