

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಲ್ಯ ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಏಕಕಾಲದಲ್ಲಿ ಕಾಲಾವಧಿ ಆಟಿ ಮಾರಿಪೂಜೆ ಬುಧವಾರ ಸಂಪನ್ನಗೊಂಡಿತು. ಮೂರೂ ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ನಡೆದ ಆಟಿ ಮಾರಿಪೂಜೆಯಲ್ಲಿ ಸಹಸ್ರಾರು ಭಕ್ತರು ಆಗಮಿಸಿ, ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ವಿವಿಧ ಹರಕೆ, ಸೇವೆಗಳನ್ನು ಸಲ್ಲಿಸಿದರು.
ಮಾರಿಪೂಜೆಯ ಪ್ರಯುಕ್ತ ಮಂಗಳವಾರ ರಾತ್ರಿ ಹಳೇ ಮಾರಿಗುಡಿಗೆ ವೆಂಕಟರಮಣ ದೇವಸ್ಥಾನದಿಂದ ಹಾಗೂ ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗೆ ಶ್ರೀ ಲಕ್ಷ್ಮೆ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಬಿಂಬ ಮತ್ತು ಚಿನ್ನಾಭರಣಗಳನ್ನು ಶೋಭಾಯತ್ರೆಯಲ್ಲಿ ತಂದು ಗದ್ದುಗೆಯೇರಿಸಿ ಮಾರಿಪೂಜೆಯ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬುಧವಾರ ಸಂಜೆ ದರ್ಶನ ಸೇವೆ ನಡೆದು ಬಳಿಕ ಮಾರಿಯಮ್ಮ ದೇವಿಯ ಬಿಂಬ ವಿಸರ್ಜಿಸಲಾಯಿತು.